ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣ: ಜಮ್ಮು-ಕಾಶ್ಮೀರದ ವಿವಿಧೆಡೆ ಎನ್ಐಎ ದಾಳಿ, 6 ಮಂದಿ ಬಂಧನ

ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದಾದ್ಯಂತ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದ್ದು, ಈ ವರೆಗೂ 6 ಮಂದಿಯನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರದ ವಿವಿಧೆಡೆ ಪರಿಶೀಲನೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು
ಜಮ್ಮು-ಕಾಶ್ಮೀರದ ವಿವಿಧೆಡೆ ಪರಿಶೀಲನೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು

ಶ್ರೀನಗರ​: ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದಾದ್ಯಂತ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದ್ದು, ಈ ವರೆಗೂ 6 ಮಂದಿಯನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಕೇಂದ್ರ ಪ್ರದೇಶವಾದ ಶ್ರೀನಗರ, ಅನಂತ್‌ನಾಗ್, ಬಾರಾಮುಲ್ಲಾ ಜಿಲ್ಲೆಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಐಸಿಸ್​ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಎನ್ಐಎ 6 ಜನರನ್ನು ಬಂಧಿಸಿದ್ದು, ಕೆಲವು ಜನರನ್ನು ವಿಚಾರಣೆಗೆ ಒಳಪಡಿಸಿದೆ. 

ಇದೇ ವೇಳೆ ಹಿಜ್ಬುಲ್​ ಮುಜಾಹಿದ್ದೀನ್ ಸಂಘಟನೆ ಮುಖ್ಯಸ್ಥರ ಪುತ್ರರು ಮತ್ತು ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಸೈಯದ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ತನ್ನ 11 ಉದ್ಯೋಗಿಗಳನ್ನು ಶನಿವಾರ ವಜಾ ಮಾಡಿದೆ ಎಂದು ಹೇಳಲಾಗುತ್ತಿದೆ. 

ಸೈಯದ್ ಅಹ್ಮದ್ ಶಕೀಲ್, ಶಾಹಿದ್ ಯೂಸುಫ್, ಸಲಾಹುದ್ದೀನ್ ಕ್ರಮವಾಗಿ ಶೇರ್-ಐ-ಕಾಶ್ಮೀರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸ್ಕಿಮ್ಸ್) ಮತ್ತು ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಭಯೋತ್ಪಾದಕ ಸಂಘಟನೆಗೆ ಬೆಂಬಲ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ತನಿಖಾ ಸಂಸ್ಥೆ ಇವರ ಭಯೋತ್ಪಾದಕ ಆರ್ಥಿಕ ನೆರವು ಕುರಿತು ಮಾಹಿತಿ ಕಲೆ ಹಾಕುತ್ತಿದೆ. ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಅವರ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹವಾಲಾ (ಬ್ಯಾಂಕೇತರ) ವಹಿವಾಟಿನ ಮೂಲಕ ಹಣವನ್ನು ಸಂಗ್ರಹಿಸುವುದು, ಸ್ವೀಕರಿಸುವುದು ಮತ್ತು ವರ್ಗಾವಣೆ ಮಾಡುವಲ್ಲಿ ಇವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com