ರಾಜಸ್ಥಾನದಲ್ಲಿ ಸಿಡಿಲು ಬಡಿದು 23 ಜನರ ಸಾವು, 27 ಮಂದಿಗೆ ಗಾಯ

ರಾಜಧಾನಿ ಜೈಪುರದಲ್ಲಿ 12 ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 23 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.
ಸಿಡಿಲಿನ ಸಾಂದರ್ಭಿಕ ಚಿತ್ರ
ಸಿಡಿಲಿನ ಸಾಂದರ್ಭಿಕ ಚಿತ್ರ

ಜೈಪುರ: ರಾಜಧಾನಿ ಜೈಪುರದಲ್ಲಿ 12 ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 23 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ವಿಪತ್ತು ನಿರ್ವಹಣಾ ಮತ್ತು ಪುನರ್ವಸತಿ ಇಲಾಖೆ ಪ್ರಕಾರ, ಜೈಪುರ ಅಲ್ಲದೇ, ಕೊಟಾ, ಜಾಲ್ವಾರ್, ಬಾರನ್, ದೋಲ್ಫುರ್, ಸವಾಯ್ ಮಾಧೋಪುರ ಮತ್ತು ಟೊಂಕ್ ಜಿಲ್ಲೆಗಳಲ್ಲಿ ಸಾವಿನ ಘಟನೆಗಳು ವರದಿಯಾಗಿದೆ.

ಜೈಪುರದಲ್ಲಿ ಸಂಭವಿಸಿದ ದೊಡ್ಡ ದುರಂತದಲ್ಲಿ, ಅಂಬರ್ ಕೋಟೆ ಬಳಿಯ ಐಕಾನಿಕ್ ವಾಚ್ ಟವರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 12 ಮಂದಿ ಯುವಕರು ಸಿಡಿಲು ಬಡಿದು ಸಾವನ್ನಪ್ಪಿದ್ದರೆ, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ ಏಳು ಜಿಲ್ಲೆಯಲ್ಲಿ ಭಾನುವಾರ ಸಿಡಿಲು ಬಡಿದು ಏಳು ಮಕ್ಕಳು ಸೇರಿದಂತೆ 23 ಜನರು ಸಾವನ್ನಪ್ಪಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಮತ್ತು ಪುನರ್ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಸಿಡಿಲು ಬಡಿದು ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಪರಿಹಾರ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ 1.65 ಕೋಟಿ ರೂಪಾಯಿಯನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇಲಾಖೆ ಪ್ರಕಾರ, 11 ಆಡುಗಳು ಸೇರಿದಂತೆ 16 ಜಾನುವಾರು ಸಿಡಿಲು ಬಡಿದು ಸಾವನ್ನಪ್ಪಿವೆ. ಈ ಅಂಕಿ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com