ಜೈಪುರ: ಸೆಲ್ಫಿ ತೆಗದುಕೊಳ್ಳುವ ವೇಳೆ ಸಿಡಿಲು ಬಡಿದು 11 ಮಂದಿ ದಾರುಣ ಸಾವು, ಹಲವರಿಗೆ ಗಾಯ

ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜೈಪುರ: ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 

ರಾಜಸ್ತಾನ ರಾಜಧಾನಿ ಜೈಪುರದ ಅಮೆರ್‌ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

ಸಿಡಿಲು ಬಡಿದಾಗ ವಾಚ್‌ ಟವರ್‌ ಮೇಲೆ 27 ಜನರು ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ  5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇನ್ನೂ ಇದಲ್ಲದೆ ರಾಜಸ್ತಾನದ ಇತರೆಡೆ ಸಿಡಿಲು ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com