ಮೇಕೆದಾಟುನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ಬೇಡ: ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ!

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ಎಂಕೆ ಸ್ಟಾಲಿನ್
ಎಂಕೆ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ರಾಜ್ಯದ ಜನರ ಒಕ್ಕೂಟದ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ಸರ್ವಪಕ್ಷಗಳ ನಿಯೋಗ ಶೀಘ್ರದಲ್ಲೇ ನವದೆಹಲಿಗೆ ಭೇಟಿ ನೀಡಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಎಲ್ಲಾ ಕಾನೂನು ಮತ್ತು ಇತರ ಕ್ರಮಗಳನ್ನು ಮುಂದುವರಿಸಲು ಸಭೆ ನಿರ್ಧರಿಸಿದೆ.

ಸಭೆಯಲ್ಲಿ ಅಂಗೀಕರಿಸಿದ ಮೂರು ನಿರ್ಣಯಗಳಲ್ಲಿ ಮೇಕೆದಾಟು ಯೋಜನೆಯು ಒಂದಾಗಿದೆ. ಇದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ. ಇದು ಭಾರತದ ಸಂವಿಧಾನಕ್ಕೆ ಸವಾಲಾಗಿದೆ ಎಂದು ಹೇಳಿದರು. ಈ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿನ ರೈತರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸಂಬಂಧಪಟ್ಟ ಯೋಜನೆಗೆ ಕೇಂದ್ರ ಸಚಿವಾಲಯವು ಅನುಮೋದನೆ ನೀಡಬಾರದು ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮತ್ತೊಂದು ನಿರ್ಣಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟುವಿನಲ್ಲಿ ಹೊಸ ಅಣೆಕಟ್ಟು ನಿರ್ಮಾಣವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡುತ್ತವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com