ಪುಲ್ವಾಮಾ ಎನ್ಕೌಂಟರ್: ಭಾರತೀಯ ಸೇನಾಪಡೆಗಳ ಗುಂಡೇಟಿಗೆ ಪಾಕಿಸ್ತಾನಿ ಕಮಾಂಡರ್ ಸೇರಿ 3 ಎಲ್ಇಟಿ ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ  ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ. 

ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು  ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com