ಬರೀ ಒಣ ಪ್ರಚಾರ, ಲಸಿಕೆ ಮಾತ್ರ ಇಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಟು ಟೀಕೆ
ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರ ಬರೀ ಒಣ ಪ್ರಚಾರ ಮಾಡುತ್ತಿದೆ, ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ.
Published: 14th July 2021 12:23 PM | Last Updated: 14th July 2021 12:23 PM | A+A A-

ರಾಹುಲ್ ಗಾಂಧಿ
ನವದೆಹಲಿ: ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರ ಬರೀ ಒಣ ಪ್ರಚಾರ ಮಾಡುತ್ತಿದೆ, ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ಬರೀ ಮಾತಿನಲ್ಲಿ ಮಾತ್ರ ಮೋದಿ ಸರ್ಕಾರ ಲಸಿಕೆ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಲಸಿಕೆ ಬಗ್ಗೆ ಟೊಳ್ಳು ಭರವಸೆ ನೀಡುತ್ತಿದ್ದಾರೆ, ಆದರೆ ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವೇರ್ ಆರ್ ವ್ಯಾಕ್ಸಿನ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಪ್ರಶ್ನಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಕೂಡ ಲಸಿಕೆ ಕೊರತೆ ಸಂಬಂಧ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಸರ್ಕಾರ ಕೇವಲ ಟೊಳ್ಳು ಭರವಸೆ ನೀಡುತ್ತಿದೆ, ಡಿಸೆಂಬರ್ ಒಳಗೆ ಎಲ್ಲಾ ವಯಸ್ಕರಿಗೂ ಲಸಿಕೆ ನೀಡುವ ಭರವಸೆ ಕೇವಲ ಭೋಗಸ್ ಎಂದು ಆರೋಪಿಸಿದ್ದಾರೆ.