ಕನ್ವರ್ ಯಾತ್ರೆಗೆ ಅವಕಾಶ ನೀಡಿದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಕೋವಿಡ್ -19 ಆತಂಕದ ನಡುವೆವಲ್ಲೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.
Published: 14th July 2021 12:31 PM | Last Updated: 14th July 2021 01:24 PM | A+A A-

ಕನ್ವರ್ ಯಾತ್ರೆ
ನವದೆಹಲಿ: ಕೋವಿಡ್ -19 ಆತಂಕದ ನಡುವೆವಲ್ಲೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.
ಕನ್ವರ್ ಯಾತ್ರೆಗೆ ನಿನ್ನೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದೆ.
ಇದರಂತೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ನಿಗದಿಪಡಿಸಿದೆ.
ಶಿವನ ಸಾವಿರಾರು ಭಕ್ತರು ಸೇರುವ ಕನ್ವರ್ ಯಾತ್ರೆಯು ಕನಿಷ್ಠ ಸಂಖ್ಯೆಯ ಜನರೊಂದಿಗೆ ನಡೆಯಬಹುದು ಹಾಗೂ ಅಗತ್ಯವಿದ್ದರೆ ನೆಗೆಟಿವ್ ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಬಹುದು ಎಂದು ಮಂಗಳವಾರ ಉತ್ತರಪ್ರದೇಶ ಸರ್ಕಾರರ ಹೇಳಿತ್ತು.
ಆದಿತ್ಯನಾಥ್ ಹೇಳಿಕೆ ನೀಡಿದ ಕೆಲವೇ ಗಂಟೆಗಳ ಬಳಿಕ ಉತ್ತರಾಖಂಡ ರಾಜ್ಯವು ತನ್ನ ಪ್ರದೇಶದಲ್ಲಿ ಕನ್ವರ್ ಯಾತ್ರೆಯನ್ನು ರದ್ದುಪಡಿಸಿತ್ತು.
ದೇವರು ಕೂಡ ಜನರು ಸಾಯುವುದನ್ನು ಬಯಸುವುದಿಲ್ಲ ಎಂದಿರುವ ಉತ್ತರಾಖಂಡ ರಾಜ್ಯ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕನ್ವರ್ ಯಾತ್ರೆಯನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ್ದರು.
ಉತ್ತರಪ್ರದೇಶ ಹಾಗೂ ಹರಿಯಾಣದ ರಾಜ್ಯದ ಶಿವಭಕ್ತರು ಹರಿದ್ವಾರಕ್ಕೆ ಆಗಮಿಸಿ ಗಂಗಾಜಲವನ್ನು ಶ್ರಾವಣದಲ್ಲಿ ತೆಗೆದುಕೊಂಡು ಹೋಗುವುದೇ ಕನ್ವರ್ ಯಾತ್ರೆಯಾಗಿದೆ.