ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಮಿಳುನಾಡು: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೊಂದ ಮಹಿಳೆ, ಐಪಿಸಿ ಸೆಕ್ಷನ್ 100ರ ಅಡಿಯಲ್ಲಿ ಬಿಡುಗಡೆ!

ಅತ್ಯಾಚಾರ ಯತ್ನದಿಂದ ತನ್ನನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ್ದ 23 ವರ್ಷದ ಯುವತಿಯನ್ನು ಆತ್ಮರಕ್ಷಣೆ ಎಂಬ ಕಾರಣಕ್ಕೆ ಪೊಲೀಸರು ಅವಳನ್ನು ಬಿಟ್ಟು ಕಳುಹಿಸಿದ್ದಾರೆ.

ಚೆನ್ನೈ: ಅತ್ಯಾಚಾರ ಯತ್ನದಿಂದ ತನ್ನನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ್ದ 23 ವರ್ಷದ ಯುವತಿಯನ್ನು ಆತ್ಮರಕ್ಷಣೆ ಎಂಬ ಕಾರಣಕ್ಕೆ ಪೊಲೀಸರು ಅವಳನ್ನು ಬಿಟ್ಟು ಕಳುಹಿಸಿದ್ದಾರೆ. 

ಇಬ್ಬರು ಮಕ್ಕಳ ತಾಯಿ ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಹೆಣಗಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಬಂಡೆಗೆ ತಲೆ ತಗುಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ನಂಬಲಾಗಿದೆ. ಮಹಿಳೆ ತನ್ನ ಆತ್ಮರಕ್ಷಣೆಗಾಗಿ ಮಾತ್ರ ನಡೆದುಕೊಂಡಿದ್ದಾಳೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿರುವಳ್ಳೂರು ಪೊಲೀಸರು ಐಪಿಸಿ ಸೆಕ್ಷನ್ 100ರ(ಖಾಸಗಿ ರಕ್ಷಣೆಯ ಹಕ್ಕು) ಅಡಿಯಲ್ಲಿ ಠಾಣೆ-ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ಪೊಲೀಸರ ಪ್ರಕಾರ, ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣೆ ಕೇಂದ್ರದಲ್ಲಿ ವ್ಯಕ್ತಿಯೊರ್ವ ಮೃತಪಟ್ಟಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದರು. ಮೃತದೇಹವನ್ನು ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ. ಆತ ವಲಸೆ ಕಾರ್ಮಿಕನಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ತನಿಖೆ ವೇಳೆ ಆ ವ್ಯಕ್ತಿ ಲಕ್ಷ್ಮಿ(ಹೆಸರು ಬದಲಾಯಿಸಲಾಗಿದೆ)ಯನ್ನು ಹಿಂಬಾಲಿಸುತ್ತಿದ್ದ ಎಂದು ತಿಳಿದುಬಂದಿದೆ. ಮಹಿಳೆ ಆತ್ಮರಕ್ಷಣೆಗಾಗಿ ಅತ್ಯಾಚಾರಿಯನ್ನು ಹತ್ಯೆ ಮಾಡಿದ್ದಾಳೆ. ಮಹಿಳೆ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದು ಮೀನು ಸಾಕಣೆ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. 

ಕಳೆದ ಬುಧವಾರ ವ್ಯಕ್ತಿಯು ಇವರಿದ್ದ ಜಾಗಕ್ಕೆ ನುಗ್ಗಿದ್ದಾನೆ. ಮಹಿಳೆಯನ್ನು ಗೇಲಿ ಮಾಡಿದ್ದಾನೆ. ನಂತರ ಆಕೆಯನ್ನು ಜಮೀನಿನಲ್ಲಿ ಏಕಾಂತ ಸ್ಥಳಕ್ಕೆ ಎಳೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಬಲತ್ಕಾರ್ಯಕ್ಕೆ ಪ್ರಯತ್ನಿಸಿದ್ದಾನೆ. ತನ್ನನ್ನು ಹಿಡಿದುಕೊಂಡಿದ್ದ ವ್ಯಕ್ತಿಯನ್ನು ಲಕ್ಷ್ಮಿ ಬಲವಾಗಿ ತಳ್ಳಿದ್ದಾಳೆ. ಕಳೆದ ರಾತ್ರಿ ಮಳೆಯಾಗಿದ್ದರಿಂದ ವ್ಯಕ್ತಿ ಜಾರಿ ಕೆಳಗೆ ಬಿದ್ದಿದ್ದಾನೆ. ತಲೆ ಬಂಡೆಗೆ ಬಡಿದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ವ್ಯಕ್ತಿ ಮೃತಪಟ್ಟ ನಂತರ ಲಕ್ಷ್ಮಿ ಆತನ ಶವವನ್ನು ಎಳೆದುಕೊಂಡು ರಸ್ತೆಬದಿಗೆ ಬಿಸಾಡಿಹೋಗಿದ್ದಾಳೆ. ಮನೆಗೆ ಹೋಗಿ ಗಂಡನಿಗೆ ನಡೆದ ಎಲ್ಲಾ ವಿಷಯವನ್ನು ತಿಳಿಸಿದ್ದಾರೆ. ಕೂಡಲೇ ಪತಿ ಸ್ಥಳೀಯರಿಗೆ ಮಾಹಿತಿ ನೀಡಿದ್ದು ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಮಾಹಿತಿಯ ಮೇರೆಗೆ ಮಿಂಜೂರ್ ಪೊಲೀಸರು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಅಲ್ಲಿಗೆ ಬಂದ ಆಂಬುಲೆನ್ಸ್ ನ ಪ್ಯಾರಾ-ಮೆಡಿಸಿನ್ ಸಿಬ್ಬಂದಿ ಆತ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com