ಮಾಸ್ಕ್ ಹಾಕಿಕೊಳ್ಳುವುದು ಮುಖಕ್ಕೋ, ಕಾಲಿಗೋ? ಉತ್ತರಾಖಂಡದ ಸಚಿವರ ಫೋಟೋ ವೈರಲ್

ಮುಖಕ್ಕೆ ಹಾಕಿಕೊಳ್ಳಬೇಕಾದ ಮಾಸ್ಕ್ ಅನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತ ಉತ್ತರಾಖಂಡದ ಸಚಿವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. 
ಕಾಲಿಗೆ ಮಾಸ್ಕ್
ಕಾಲಿಗೆ ಮಾಸ್ಕ್

ಡೆಹರಾಡೂನ್: ಮುಖಕ್ಕೆ ಹಾಕಿಕೊಳ್ಳಬೇಕಾದ ಮಾಸ್ಕ್ ಅನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತ ಉತ್ತರಾಖಂಡದ ಸಚಿವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. 

ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಫೋಟೋವೊಂದು ವೈರಲ್ ಆಗಿದ್ದು, ಆ ಕಾಲ ಬೆರಳಿನಲ್ಲಿ ಜೋತಾಡುತ್ತಿರುವ ಮಾಸ್ಕ್ ನೋಡಿದ ನೆಟ್ಟಿಗರು ಸಿಟ್ಟಾಗಿದ್ದಾರೆ.

ಟಿಕಾಯತ್ ಉತ್ತರಾಖಂಡದ ಬಿಜೆಪಿ ಸರ್ಕಾರದ ಸಚಿವ ಸ್ವಾಮಿ ಯತೀಶ್ವರಾನಂದ ಅವರೇ ಈ ವಿಚಿತ್ರ ವರ್ತನೆ ತೋರಿದ್ದಾರೆ. ಸಭೆಯಲ್ಲಿರುವ ಇತರೆ ನಾಲ್ವರು ಸಹ ಮಾಸ್ಕ್ ಧರಿಸಿಲ್ಲ ಎಂಬುದು ಗಮನಾರ್ಹವೆನಿಸುತ್ತದೆ.

ಉತ್ತರಾಖಂಡದ ಕಾಂಗ್ರೆಸ್ ವಕ್ತಾರೆ ಗರೀಮಾ ಮೆಹ್ರಾ ದಸೌನಿ, ಈ ಚಿತ್ರವನ್ನು ಹಂಚಿದ್ದು, ವೈರಲ್ ಆಗಿದೆ. ಆಡಳಿತ ಪಕ್ಷದ ನಿಷ್ಠೆ ಇದಾಗಿದ್ದು, ಬಳಿಕ ಮಾಸ್ಕ್ ಧರಿಸದ್ದಕ್ಕೆ ಬಡವರನ್ನು ಶಿಕ್ಷಿಸುತ್ತಾರೆ. ಕೋವಿಡ್ ಎರಡನೇ ಅಲೆಯಲ್ಲಿ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಾಗ ಜನರಿಗೆ ಯಾವ ಸಂದೇಶವನ್ನು ನೀಡಲು ಬಯಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ನಿಮಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಹಾಗಿರುವಾಗ ಜನರಿಗೆ ಮಾದರಿಯಾಗಬೇಕಾಗಿರುವ ಸಚಿವರೇ ನಿಯಮ ಉಲ್ಲಂಘಿಸಿ, ನಿರ್ಲಕ್ಷ್ಯ ವಹಿಸುತ್ತಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com