ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸಿಧು ಹೆಸರು: ಸೋನಿಯಾಗೆ ಪತ್ರ ಬರೆದು ಸಿಎಂ ಕ್ಯಾ. ಅಮರಿಂದರ್‌ ಸಿಂಗ್ ಅತೃಪ್ತಿ

ಪಂಜಾಬ್‌ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ನವಜೋತ್‌ ಸಿಂಗ್‌ ಸಿಧು ಅವರನ್ನು ನೇಮಿಸುವ ಸಾಧ್ಯತೆಗಳು ದಟ್ಟವಾಗಿರುವಂತೆಯೇ ಇತ್ತ ಈ ಕುರಿಂತೆ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಸಿಧು-ಅಮರೀಂದರ್ ಸಿಂಗ್
ಸಿಧು-ಅಮರೀಂದರ್ ಸಿಂಗ್

ಚಂಡೀಗಢ: ಪಂಜಾಬ್‌ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ನವಜೋತ್‌ ಸಿಂಗ್‌ ಸಿಧು ಅವರನ್ನು ನೇಮಿಸುವ ಸಾಧ್ಯತೆಗಳು ದಟ್ಟವಾಗಿರುವಂತೆಯೇ ಇತ್ತ ಈ ಕುರಿಂತೆ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಕುರಿಂತೆ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಪತ್ರದಲ್ಲಿ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, 'ಹಳಬರನ್ನು ಕಡೆಗಣಿಸಿದರೆ ಮುಂಬರುವ ವಿಧಾನಸಭಾ  ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪಕ್ಷದಲ್ಲಿ ಹಿಂದೂ ಮತ್ತು ದಲಿತ ಸಮುದಾಯಗಳನ್ನು ಪ್ರತಿನಿಧಿಸುವ ಇತರ ಹಿರಿಯ ನಾಯಕರಿದ್ದು, ಅವರನ್ನು ಕಡೆಗಣಿಸಬಾರದು ಎಂದು ಹೇಳುವ ಮೂಲಕ ಸಿಧು ಆಯ್ಕೆಯನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ  ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಹಿರಿಯ ಮುಖಂಡ ಮನೀಶ್ ತಿವಾರಿ ಅವರು ರಾಜ್ಯದ ಜನಸಂಖ್ಯಾ ಸಂಯೋಜನೆ ಕುರಿತು ಚರ್ಚೆ ಮಾಡುತ್ತಾ, ಅಧ್ಯಕ್ಷ ಹುದ್ದೆಗೆ ಹಿಂದೂ ಧರ್ಮಿಯರನ್ನು ನೇಮಿಸುವ ಅಗತ್ಯವನ್ನು ಗುರುವಾರವಷ್ಟೇ ಪ್ರತಿಪಾದಿಸಿದ್ದರು‌. ಇದರ ಬೆನ್ನಲ್ಲೇ ಅಮರೀಂದರ್ ಸಿಂಗ್ ಅವರ ಪತ್ರ  ಇದೀಗ ಪಂಜಾಬ್ ರಾಜಕೀಯದಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿದೆ. 

ಮತ್ತೊಂದೆಡೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಅವರು ಶನಿವಾರ ಚಂಡೀಗಢದಲ್ಲಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಅಧ್ಯಕ್ಷಗಾದಿಗೆ ಸಿಧು!
ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಗುರುವಾರ ವರದಿಗಳಾಗಿದ್ದವು. ಇವರ ಜೊತೆಗೆ ಒಬ್ಬ ದಲಿತ , ಇತರ ಜಾತಿಯ ಮತ್ತೊಬ್ಬರನ್ನು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಕಾರ್ಯಾಧ್ಯಕ್ಷ ಹುದ್ದೆಗೆ ಸಚಿವ ವಿಜಯ್ ಇಂದರ್ ಸಿಂಗ್ಲಾ ಮತ್ತು ಸಂಸದ  ಸಂತೋಖ್ ಚೌಧರಿ ಅವರ ಹೆಸರುಗಳು ಕೇಳಿಬಂದಿವೆ. ಪ್ರಸ್ತುತ ಪಿಪಿಸಿಸಿಗೆ ಸುನೀಲ್ ಜಾಖರ್ ಅವರು ಅಧ್ಯಕ್ಷರಾಗಿದ್ದಾರೆ.

ಇತ್ತೀಚೆಗಷ್ಟೇ ಸಿಧು ಆಮ್ ಆದ್ಮಿ ಪಕ್ಷದ ಪರ ಮಾತನಾಡಿದ್ದರು. ಅಂತೆಯೇ ಆಪ್ ಅಧ್ಯಕ್ಷ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಸಿಧು ಪರ ಬ್ಯಾಟ್ ಬೀಸಿದ್ದರು, ಆದರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಅಮರೀಂದರ್ ಸಿಂಗ್ ಅವರು, ಕೃಷಿ ಸಮುದಾಯಕ್ಕಾಗಿ ಆಮ್ ಆದ್ಮಿ ಪಕ್ಷ  ಏನನ್ನೂ ಮಾಡಲು ಯಾವುದೇ ಆಸಕ್ತಿಯನ್ನು ತೋರಿಸಲಿಲ್ಲ ಎಂದು ಹೇಳುವ ಮೂಲಕ ಅದನ್ನು ವಿರೋಧಿಸಿದ್ದರು. ಅಲ್ಲದೆ ಸಾಲ ಮನ್ನಾ ಕುರಿತು ನನ್ನ ಸರ್ಕಾರದ ನಿರ್ಧಾರದ ಬಗ್ಗೆ ಎಎಪಿ ಟೀಕೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷದ ರೈತ ವಿರೋಧಿ ನಿಲುವನ್ನು ಬಹಿರಂಗಪಡಿಸುತ್ತದೆ ಎಂದು ಟೀಕಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com