'ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಯೋಜನೆ'

ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಆಡಳಿತ ಪಕ್ಷ ಬಿಜೆಪಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ‘ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಸಮಸ್ಯೆಯಲ್ಲ.
ಶಶಿ ತರೂರ್
ಶಶಿ ತರೂರ್

ನವದೆಹಲಿ: ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಜಾರಿಗೆ ತರುವ ಯೋಜನೆಯನ್ನು ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಬಿಜೆಪಿಯ ಉದ್ದೇಶವು ರಾಜಕೀಯವಾಗಿದ್ದು, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವ ಇರಾದೆಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ. 

ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಆಡಳಿತ ಪಕ್ಷ ಬಿಜೆಪಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ‘ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಸಮಸ್ಯೆಯಲ್ಲ. ಆದರೆ, ಮುಂದಿನ 20 ವರ್ಷಗಳಲ್ಲಿ ಹಿರಿಯ ವಯಸ್ಕರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವುದು ದೊಡ್ಡ ಸವಾಲಾಗಿ ಪರಿಣಮಿಸಲಿದೆ’ ಎಂದಿದ್ದಾರೆ. 

ಜನಸಂಖ್ಯೆಯನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಹೇಳುತ್ತಿರುವ ಮೂರು ರಾಜ್ಯಗಳಲ್ಲಿ (ಉತ್ತರ ಪ್ರದೇಶ, ಅಸ್ಸಾಂ ಮತ್ತು ಲಕ್ಷದ್ವೀಪ) ಬಿಜೆಪಿ ಗುರಿಯಾಗಿಸಿದ ಜನರು ಯಾರೆಂಬುದು ಎಲ್ಲರಿಗೂ ತಿಳಿದಿದೆ' ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ರಾಜಕೀಯದಲ್ಲಿನ ಹಿಂದುತ್ವ ಅಂಶಗಳು ನಿಜವಾಗಿಯೂ ಜನಸಂಖ್ಯಾ ಸಮಸ್ಯೆಗಳನ್ನು ಅಧ್ಯಯನ ಮಾಡಿಲ್ಲ. ಇದರ ಉದ್ದೇಶವು ರಾಜಕೀಯ ಹಾಗೂ ಕೋಮುವಾದ ಪ್ರೇರಿತವಾಗಿದೆ' ಎಂದಿದ್ದಾರೆ.

ಹೆಚ್ಚುತ್ತಿರುವ ಜನಸಂಖ್ಯೆ ಅಭಿವೃದ್ಧಿಗೆ ಅಡ್ಡಿ ಎಂದು ಹೇಳಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನಸಂಖ್ಯಾ ನಿಯಂತ್ರಣಕ್ಕೆ ನೀತಿ ಪ್ರಕಟಿಸಿದ್ದಾರೆ. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com