'ಮಹಾ'ಮಳೆಗೆ ಕುಸಿದ ಗೋಡೆ; 11 ಮಂದಿ ಧಾರುಣ ಸಾವು

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡಿ ಕುಸಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಎಂದು ತಿಳಿದುಬಂದಿದೆ.
ಗೋಡೆ ಕುಸಿದು ಹಲವರ ಸಾವು
ಗೋಡೆ ಕುಸಿದು ಹಲವರ ಸಾವು

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡಿ ಕುಸಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಚೆಂಬೂರಿನ ಭಾರತಿ ನಗರ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದ್ದು, ಗೋಡೆ ಅಲ್ಲಿದ್ದ ಗುಡಿಸಲುಗಳು ಮೇಲೆ ಬಿದಿದ್ದು, ಈ ವೇಳೆ ಅಲ್ಲಿದ್ದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. 

ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 2 ತಂಡ ದೌಡಾಯಿಸಿದ್ದು,ಅಗ್ನಿ ಶಾಮಕ ದಳದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com