ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆ: ದೇಶದಲ್ಲಿಂದು 30,093 ಹೊಸ ಕೇಸ್ ಪತ್ತೆ, 374 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಮಂಗವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 30,093 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 374 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಮಂಗವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 30,093 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 374 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಮಂಗವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,11,74,322ಕ್ಕೆ ತಲುಪಿದ್ದು, ಸಾವಿನ 4,14,482ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,06,130ಕ್ಕೆ ಕುಸಿದಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 45,254 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,03,53,710ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,92,336 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,73,41,133 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 41,18,46,401 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com