ಪೆಗಾಸಸ್ ವಿವಾದ: ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಒತ್ತಾಯ

ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ಮುಂದುವರೆಸಿದ್ದು ಈ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿದೆ.
ಶಕ್ತಿಸಿನ್ಹಾ ಗೋಯಿಲ್
ಶಕ್ತಿಸಿನ್ಹಾ ಗೋಯಿಲ್

ನವದೆಹಲಿ: ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ಮುಂದುವರೆಸಿದ್ದು ಈ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ವಿರೋಧ ಪಕ್ಷವು ಇತರ ಪಕ್ಷಗಳೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಎಬ್ಬಿಸಿದ್ದು ಅಧಿವೇಶನಕ್ಕೆ ಅಡ್ಡಿಪಡಿಸಿವೆ.

ಇಸ್ರೇಲಿ ಪೆಗಾಸಸ್ ಸ್ಪೈವೇರ್ ಮೂಲಕ ಪತ್ರಕರ್ತರು, ರಾಜಕಾರಣಿಗಳು, ಮಂತ್ರಿಗಳು, ನ್ಯಾಯಾಧೀಶರು ಮತ್ತು ಇತರರ ಮೇಲೆ ಬೇಹುಗಾರಿಕೆ ನಡೆಸಿದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಪೆಗಾಸಸ್ ಸ್ಪೈವೇರ್ ಖರೀದಿಸಿದ್ದಾರೋ? ಇಲ್ಲವೋ? ಎಂಬುದನ್ನು ಸರ್ಕಾರ ಸ್ಪಷ್ಟವಾಗಿ ಹೇಳಬೇಕು ಮತ್ತು ಜಂಟಿ ಸಂಸದೀಯ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹಾ ಗೋಯಿಲ್ ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ವಿಷಯದ ಬಗ್ಗೆ ರಾಷ್ಟ್ರೀಯ ಭದ್ರತೆ ಮತ್ತು ಸಂವಿಧಾನದ ಅಡಿಯಲ್ಲಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆ ಕುರಿತು ಚರ್ಚೆ ನಡೆಸಲು ನಾವು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನೋಟಿಸ್ ನೀಡಿದ್ದೇವೆ. ಬೇಹುಗಾರಿಕೆ ಮತ್ತು ಫೋನ್ ಟ್ಯಾಪಿಂಗ್ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂಬುದು ಪಕ್ಷದ ಬೇಡಿಕೆಯಾಗಿದೆ ಎಂದು ಗೋಹಿಲ್ ಹೇಳಿದರು.

ಈ ವಿಷಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದ ಸಚಿವರು, ಸರ್ಕಾರವು ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆಯೋ ಇಲ್ಲವೋ ಎಂಬುದಕ್ಕೆ ಸ್ಪಷ್ಟವಾಗಿ ಉತ್ತರಿಸಬೇಕು. ಹೌದು, ಇಡೀ ವಿಷಯದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಅವರು ಹೇಳಿದರು.

ಪೆಗಾಸಸ್ ಸಾಫ್ಟ್‌ವೇರ್ ಬಳಸುವ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರ ಮೇಲೆ ಬೇಹುಗಾರಿಕೆ ಆರೋಪಗಳನ್ನು ಲೋಕಸಭೆಯಲ್ಲಿ ನಿನ್ನೆ ಸರ್ಕಾರ ತಿರಸ್ಕರಿಸಿತ್ತು. ದೇಶದ ಕಾನೂನುಗಳಲ್ಲಿನ ತಪಾಸಣೆ ಮತ್ತು ಸಮತೋಲನದಿಂದ ಅಕ್ರಮ ಕಣ್ಗಾವಲು ಸಾಧ್ಯವಿಲ್ಲ ಎಂದು ಹೇಳಿತ್ತು. ಅಲ್ಲದೆ ಭಾರತೀಯ ಪ್ರಜಾಪ್ರಭುತ್ವವನ್ನು ಕೆಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಇಬ್ಬರು ಮಂತ್ರಿಗಳು, 40ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಓರ್ವ ನ್ಯಾಯಾಧೀಶರು ಸೇರಿದಂತೆ 300ಕ್ಕೂ ಹೆಚ್ಚು ಪರಿಶೀಲಿಸಿದ ಮೊಬೈಲ್ ಫೋನ್ ಸಂಖ್ಯೆಗಳನ್ನು ಸ್ಪೈವೇರ್ ಮೂಲಕ ಹ್ಯಾಕ್ ಮಾಡಲು ಗುರಿಯಾಗಬಹುದೆಂದು ಅಂತಾರಾಷ್ಟ್ರೀಯ ಮಾಧ್ಯಮ ಒಕ್ಕೂಟವು ಭಾನುವಾರ ವರದಿ ಮಾಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com