ಕೇಂದ್ರದ ತಪ್ಪು ನಿರ್ಧಾರಗಳಿಂದ ಕೋವಿಡ್ 2ನೇ ಅಲೆಯಲ್ಲಿ 50 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿ

ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 

Published: 21st July 2021 11:22 PM  |   Last Updated: 22nd July 2021 01:04 PM   |  A+A-


Rahul Gandhi

ರಾಹುಲ್ ಗಾಂಧಿ

Posted By : Srinivas Rao BV
Source : The New Indian Express

ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ಕೋವಿಡ್-19 ಎರಡನೇ ಅಲೆಯಲ್ಲಿ 50 ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಭಾರತ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಈ ವರೆಗೂ 4.18 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. 

ಜಾಗತಿಕ ಅಭಿವೃದ್ಧಿಯ ಕೇಂದ್ರದ ಅಧ್ಯಯನ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ರೈತರ ಹೋರಾಟವನ್ನೂ ಉಲ್ಲೇಖಿಸಿದ್ದು, "ರೈತರ ಪ್ರತಿಭಟನೆಯಲ್ಲಿ ಜೀವ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವುದಕ್ಕೂ ನಿರಾಕರಿಸಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವವರ ಕಣ್ಣೀರಲ್ಲಿ ಎಲ್ಲವೂ ದಾಖಲಾಗಿದೆ" ಎಂದು ಹೇಳಿದ್ದಾರೆ.  


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp