ಟಿಎಂಸಿ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮಮತಾ ಬ್ಯಾನರ್ಜಿ ಸರ್ವಾನುಮತದಿಂದ ಆಯ್ಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಸಂಸದರು ಸರ್ವಾನುಮತದಿಂದ ತಮ್ಮ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಸಂಸದರು ಸರ್ವಾನುಮತದಿಂದ ತಮ್ಮ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದ ರಾಜ್ಯಸಭಾ ಸದಸ್ಯ ಡೆರೆಕ್ ಒ'ಬ್ರಿಯೆನ್ ಅವರು, ಮಮತಾ ಬ್ಯಾನರ್ಜಿ ಅವರು ಟಿಎಂಸಿ ಸಂಸದೀಯ ಪಕ್ಷದ ಹಿಂದಿನ ಮಾರ್ಗದರ್ಶಕ ಶಕ್ತಿಯಾಗಿದ್ದಾರೆ ಎಂದು ಹೇಳಿದರು.

"ನಾವು ವಾಸ್ತವವನ್ನು ಅಧಿಕೃತಗೊಳಿಸುತ್ತಿದ್ದೇವೆ. ನಮ್ಮ ಅಧ್ಯಕ್ಷರು ಏಳು ಬಾರಿ ಸಂಸತ್ ಸದಸ್ಯರಾಗಿದ್ದಾರೆ. ಸಂಸದೀಯ ಪಕ್ಷಕ್ಕೆ ಮಾರ್ಗದರ್ಶನ ನೀಡುವ ದೃಷ್ಟಿ ಅವರಲ್ಲಿದೆ. ಅವರಿಗೆ ಅನುಭವ ಮತ್ತು ಒಳನೋಟವಿದೆ. ಅವರು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ" ಎಂದು ತಿಳಿಸಿದರು.

ಮಮತಾ ಬ್ಯಾನರ್ಜಿ ಅವರು ಸಂಸತ್ ಸದಸ್ಯರಾಗಿಲ್ಲ. ಆದರೂ ಎಲ್ಲಾ ಟಿಎಂಸಿ ಸಂಸದರು ಬ್ಯಾನರ್ಜಿ ಅವರನ್ನು ತಮ್ಮ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಡೆರೆಕ್ ಒ'ಬ್ರಿಯೆನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com