ಬಿಹಾರ: ಪೊಲೀಸ್ ವಶದಲ್ಲಿದ್ದ ಯುವಕ ಸಾವು; ಕೋಪೋದ್ರಿಕ್ತ ಗುಂಪಿನಿಂದ ಮಹಿಳಾ ಕಾನ್ಸ್ ಟೆಬಲ್ ಹತ್ಯೆ!

ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜೆಹಾನಾಬಾದ್(ಬಿಹಾರ): ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ.

ಪ್ರತಿಭಟನಾಕಾರರು ಭಾರೀ ಕಲ್ಲು ತೂರಾಟ ನಡೆಸಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇನ್ನು ಕಲ್ಲು ತೂರಾಟದಲ್ಲಿ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಜೆಹಾನಾಬಾದ್ನ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಜೆಹಾನಾಬಾದ್ ಜಿಲ್ಲೆಯ ಪರಸ್ಬಿಘಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದರಿಂದ ಜೆಹಾನಾಬಾದ್-ಅರ್ವಾಲ್ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮದ್ಯ ವ್ಯಾಪಾರದಲ್ಲಿ ತೊಡಗಿದ್ದಕ್ಕಾಗಿ ಈ ಹಿಂದೆ ಗೋವಿಂದ್ ಮಾಂಝಿ ಎಂಬಾತನನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದ ಆದೇಶದ ಹಿನ್ನೆಲೆಯಲ್ಲಿ ಆತನನ್ನು ಔರಂಗಾಬಾದ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಆತನ ಗ್ರಾಮಸ್ಥರಿಗೆ ತಲುಪಿತ್ತು. ಇನ್ನು ಗೋವಿಂದ ಗೆ ದೈಹಿಕ ಚಿತ್ರಹಿಂಸೆಯಿಂದಾಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿ ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆಯಲು ಯತ್ನಿಸಿದ್ದಾರೆ. ಇದರಿಂದ ಕೋಪಗೊಂಡ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ.

ಉದ್ರಿಕ್ತರನ್ನು ಚದುರಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಪೇದೆ ಕಾಂತಿ ದೇವಿ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ಎಸ್ ಡಿಪಿಒ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಪಾಂಡೆ ಹೇಳಿದರು.

ವಿಶೇಷವೆಂದರೆ, ಆರು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ಕಠಿಣ ನಿಷೇಧ ಕಾನೂನು ತಂದಿದ್ದು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com