ಸಿಂಗು ಗಡಿಯ ರೈತರ ಪ್ರತಿಭಟನಾ ಸ್ಥಳದಲ್ಲಿ ಅಗ್ನಿ ಅವಘಡ, ಟೆಂಟ್ ಗೆ ಹಾನಿ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 24th July 2021 08:10 PM | Last Updated: 24th July 2021 08:10 PM | A+A A-

ಸಾಂದರ್ಭಿಕ ಚಿತ್ರ
ಸೋನಿಪತ್: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಸಿಂಗು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಟೆಂಟ್ ಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಹೊಸ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ರೈತರು ಕಳೆದ ನವೆಂಬರ್‌ನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಕಾನೂನುಗಳು ರೈತ ಪರವಾಗಿವೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಈ ಸಂಬಂಧ
ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ರೈತರ ಮನವೊಲಿಸುವಲ್ಲಿ ಸರ್ಕಾರ ವಿಫಲವಾಗಿದೆ.