ಎನ್ಇಇಟಿ, ಇತರ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಲೋಕಸಭೆಗೆ ಸರ್ಕಾರದ ಮಾಹಿತಿ
ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
Published: 24th July 2021 01:35 AM | Last Updated: 24th July 2021 01:35 AM | A+A A-

ನೀಟ್ ಪರೀಕ್ಷೆ (ಸಾಂಕೇತಿಕ ಚಿತ್ರ)
ನವದೆಹಲಿ: ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
2021 ನೇ ಸಾಲಿನ ಸ್ನಾತಕೋತ್ತರ ಪದವಿಗೆ ಎನ್ಇಇಟಿ ಹಾಗೂ ಪದವಿಪೂರ್ವ ಎನ್ಇಇಟಿ ಪರೀಕ್ಷೆಗಳು ಸೆಪ್ಟೆಂಬರ್ 11 ಹಾಗೂ 12 ರಂದು ಅನುಕ್ರಮವಾಗಿ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಕೋವಿಡ್-19 ಗೆ ಸೂಕ್ತ ನಡಾವಳಿ ಹಾಗೂ ನಿರ್ದಿಷ್ಟ ಶಿಷ್ಟಾಚಾರಗಳನ್ನು ಪಾಲನೆ ಮಾಡಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪವಾರ್ ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ರಕ್ಷಣಾತ್ಮಕ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ದಟ್ಟಣೆಯನ್ನು ತಪ್ಪಿಸುವುದಕ್ಕಾಗಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ನೀಡಲಾಗುವ ಕಾರ್ಡ್ ಗಳಲ್ಲಿ ಕೋವಿಡ್ ಇ ಪಾಸ್ ಗಳನ್ನೂ ನೀಡಲಾಗಿರುತ್ತದೆ ಈ ಮೂಲಕ ಅಭ್ಯರ್ಥಿಗಳ ಸಂಚಾರ ಸುಗಮವಾಗಲಿದೆ ಎಂದು ಸಚಿವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಗಳಿಗೆ ತಾಪಮಾನ ಪರೀಕ್ಷೆ ಇರಲಿದ್ದು, ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚು ತಾಪಮಾನ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಐಸೊಲೇಷನ್ ಲ್ಯಾಬ್ ನಲ್ಲಿ ಪರೀಕ್ಷೆ ಬರೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಸ್ಕ್ ಕಡ್ಡಾಯದ ಜೊತೆಗೆ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಗಳನ್ನೂ ಅಭ್ಯರ್ಥಿಗಳಿಗೆ ಒದಗಿಸಲಾಗುತ್ತದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.