ಮಹಾ ಮಳೆ: ಸತಾರಾದ ಅಂಬೇಘರ್ ಭೂಕುಸಿತ ಸ್ಥಳದಲ್ಲಿ ಐದು ಮೃತ ದೇಹ ಪತ್ತೆ
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಅಂಬೇಘರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತ ಸ್ಥಳದಿಂದ ಶನಿವಾರ ಐದು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 24th July 2021 02:42 PM | Last Updated: 24th July 2021 02:42 PM | A+A A-

ಸತಾರಾದಲ್ಲಿ ಎನ್ ಡಿಆರ್ ಎಫ್ ಕಾರ್ಯಾಚರಣೆ
ಪುಣೆ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಅಂಬೇಘರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತ ಸ್ಥಳದಿಂದ ಶನಿವಾರ ಐದು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಟಾನ್ ತಹಸಿಲ್‌ನಲ್ಲಿರುವ ಈ ಗ್ರಾಮದಲ್ಲಿ ಭೂಕುಸಿತದಿಂದಾಗಿ ನಾಲ್ಕೈದು ಮನೆಗಳು ಮಣ್ಣಿನ ಅಡಿಯಲ್ಲಿ ಸಿಲುಕಿದ್ದು, ಕನಿಷ್ಠ 16 ಜನರು ಭೂಕುಸಿತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿತ್ತು.
ಅಂಬೇಘರ್‌ನಲ್ಲಿ ನಡೆದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನಾವು ಈವರೆಗೆ ಐದು ಶವಗಳನ್ನು ಪತ್ತೆ ಮಾಡಿದ್ದೇವೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯನ್ನು ಸ್ಥಳೀಯ ಪೊಲೀಸರು, ನಿವಾಸಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನಡೆಸುತ್ತಿದೆ ಎಂದು ಸತಾರಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.