ಮಹಾರಾಷ್ಟ್ರ: ಮಳೆ ಅಬ್ಬರಕ್ಕೆ 129 ಜನ ಸಾವು; 84,452 ಮಂದಿ ಸ್ಥಳಾಂತರ

ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಜಲಾವೃತ ರಸ್ತೆಗಳಲ್ಲಿ ಸಿಲುಕಿದ ವಾಹನಗಳು
ಜಲಾವೃತ ರಸ್ತೆಗಳಲ್ಲಿ ಸಿಲುಕಿದ ವಾಹನಗಳು

ಪುಣೆ: ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ಕಳೆದ 2 ದಿನಗಳಲ್ಲಿ ರಾಯಗಢ, ರತ್ನಗಿರಿ ಸೇರಿ ರಾಜ್ಯದ ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ಪುಣೆ ವಿಭಾಗದಲ್ಲಿ 84,452 ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಯ್ ಘಡದ ಮಹದ್ ತೆಹ್ಸಿಲ್ ನಲ್ಲಿ ಸಂಭವಿಸಿದ ಭೂ ಕುಸಿತದಿಂದ 38 ಮಂದಿ ಸಾವನ್ನಪ್ಪಿದ್ದರೆ, 8 ಮಂದಿ ನೇಪಾಳಿ ಕಾರ್ಮಿಕರು ಸೇರಿ 11 ಮಂದಿಯನ್ನು ಅವರಿದ್ದ ಬಸ್ ಪ್ರವಾಹದಲ್ಲಿ ಕೊಚ್ಚಿ ಹೋಗುವುದಕ್ಕೂ ಮುನ್ನ ರಕ್ಷಿಸಿರುವ ಘಟನೆ ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದಿದೆ.

48 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹದ ಕಾರಣಕ್ಕಾಗಿ ಸಂಭವಿಸಿರುವ ಸಾವುಗಳ ಸಂಖ್ಯೆ 129 ಕ್ಕೆ ಏರಿಕೆಯಾಗಿದೆ. ಕೊಲ್ಹಾಪುರ ಜಿಲ್ಲೆಯೊಂದರಲ್ಲೇ 40,882 ಮಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಬೆಳಿಗ್ಗೆಯಿಂದಲೂ ಪರಿಸ್ಥಿತಿಯ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಮಾಹಿತಿ ಪಡೆಯುತ್ತಿದ್ದು, ಮಳೆ ಹಾಗೂ ಪ್ರವಾಹದಿಂದಾಗಿ ಸಂಭವಿಸಿರುವ ನಷ್ಟದ ಪ್ರಮಾಣ ಈಗಲೇ ಅಂದಾಜಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ನನ್ನೊಂದಿಗೆ ಮಾತನಾಡಿದ್ದು, ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ" ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com