ರಾಜ್ಯಗಳ ಬಳಿ ಇನ್ನೂ 2.98 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 2.98 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 2.98 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 44.53 (44,53,86,390) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದ ಒಟ್ಟು 2,98,35,847ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಶನಿವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 41,55,50,543 ಕೋಟಿ ಡೋಸ್ ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 85,58,360 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ. 

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 42,78,82,261 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com