ಅಪಹರಣಕ್ಕೊಳಗಾಗಿ, ಮಾರಾಟವಾಗಿದ್ದ 16 ವರ್ಷದ ಬಾಲಕಿಯನ್ನು ಮಧ್ಯ ಪ್ರದೇಶದಲ್ಲಿ ರಕ್ಷಿಸಿದ ದೆಹಲಿ ಪೊಲೀಸರು

16 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಮದುವೆಗಾಗಿ ಮತ್ತೊಬ್ಬ ವ್ಯಕ್ತಿಗೆ 50,000 ರೂ.ಗೆ ಮಾರಾಟವಾಗಿದ್ದ ಬಾಲಕಿಯನ್ನು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 16 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಮದುವೆಗಾಗಿ ಮತ್ತೊಬ್ಬ ವ್ಯಕ್ತಿಗೆ 50,000 ರೂ.ಗೆ ಮಾರಾಟವಾಗಿದ್ದ ಬಾಲಕಿಯನ್ನು ಮಧ್ಯ ಪ್ರದೇಶದ ಭಿಂದ್ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ ಮತ್ತು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶನಿವಾರ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ರಾಜೀವ್ ಗರ್ಗ್ ಸೋಷಿಯಲ್ ಮೀಡಿಯಾದಲ್ಲಿ ನಕಲಿ ಐಡಿ ಕ್ರಿಯೇಟ್ ಮಾಡಿ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದು, ವಾಯುವ್ಯ ದೆಹಲಿಯಲ್ಲಿ ತನ್ನನ್ನು ಭೇಟಿಯಾಗಲು ಭಾವನಾತ್ಮಕವಾಗಿ ಬ್ಲ್ಯಾಕ್ಮೇಲ್ ಮಾಡಿದ್ದು, ಅಲ್ಲಿಂದ ಬಾಲಕಿಯನ್ನು ಅಪಹರಿಸಿ ಭಿಂದ್ ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.

ಮೇ 29 ರಂದು, ಹುಡುಗಿ ತನ್ನ ಸ್ನೇಹಿತರ ಮನೆಗೆ ಹೋಗುತ್ತಿದ್ದೇನೆ ಎಂದು ಪೋಷಕರಿಗೆ ತಿಳಿಸಿದ್ದಳು. ಆದರೆ ಬಾಲಕಿ ಹಿಂತಿರುಗದಿದ್ದಾಗ, ಬಾಲಕಿ ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿತು. ಪತ್ತೆಯಾಗದಿದ್ದಾಗ, ಮರುದಿನ ರಾನ್ಹೋಲಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 363 (ಅಪಹರಣಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆಯ ಫೋನ್ ಕರೆ ವಿವರಗಳನ್ನು ಪರಿಶೀಲಿಸಲಾಯಿತು. ಪೊಲೀಸರು ನಿರ್ದಿಷ್ಟ ಮೊಬೈಲ್ ಸಂಖ್ಯೆಯ ಮೇಲೆ ಹೆಚ್ಚು ಗಮನ ಹರಿಸಿದಾಗ ಅದು ಉತ್ತರ ಪ್ರದೇಶದ ಇಟವಾ ಮತ್ತು ಗ್ವಾಲಿಯರ್ ಹಾಗೂ ಮಧ್ಯ ಪ್ರದೇಶದ ಭಿಂದ್ ಎಂದು ಕಂಡುಬಂದಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಹುಡುಗಿ ಕಾಣೆಯಾದ ದಿನ ಆ ಮೊಬೈಲ್ ಸಂಖ್ಯೆಯ ಲೊಕೇಷನ್ ದೆಹಲಿಯಲ್ಲಿತ್ತು. ಮೊಬೈಲ್ ಲೊಕೇಷನ್ ಆಧರಿಸಿ ಪೊಲೀಸರು ಗುರುವಾರ ಗಾರ್ಗ್‌ನನ್ನು ಭಿಂದ್‌ನಿಂದ ಬಂಧಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ಅಪರಾಧ) ಮೋನಿಕಾ ಭರದ್ವಾಜ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com