ಮುಂದಿನ ವರ್ಷ ಪಂಜಾಬ್ ಅಸೆಂಬ್ಲಿ ಚುನಾವಣೆಗಾಗಿ ಎಎಪಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ - ರಾಘವ್ ಚಾಧಾ

ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ರಾಘವ್ ಚಾಧಾ ಸೋಮವಾರ ಹೇಳಿದ್ದಾರೆ.
ಎಎಪಿ ಮುಖಂಡ ರಾಘವ್ ಚಾಧಾ
ಎಎಪಿ ಮುಖಂಡ ರಾಘವ್ ಚಾಧಾ

ಚಂಡೀಘಡ: ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ರಾಘವ್ ಚಾಧಾ ಸೋಮವಾರ ಹೇಳಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 117 ಸ್ಥಾನಗಳಲ್ಲಿ ತನ್ನ ಸ್ವಂತ ಸಾಮರ್ಥ್ಯದಿಂದ ಎಎಪಿ ಸ್ಪರ್ಧಿಸಲಿದೆ ಎಂದು ಎಎಪಿ ಪಂಜಾಬ್ ಉಸ್ತುವಾರಿಯೂ ಆಗಿರುವ ಚಾಧಾ ತಿಳಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದೊಂದಿಗೆ ಎಎಪಿ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಾಧಾ, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಎಎಪಿ ತನ್ನ ಸ್ವಂತ ಬಲದಿಂದ ಪೈಪೋಟಿ ನಡೆಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ, ತನ್ನ ಸ್ವಂತ ಸಾಮರ್ಥ್ಯದಿಂದ ಎಲ್ಲಾ 117 ವಿಧಾನಸಭಾ ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದ್ದು, ಸರ್ಕಾರ ರಚಿಸಲಿದೆ ಎಂದರು.

ಈ ಮಧ್ಯೆ, ಹಿರಿಯ ಕಾಂಗ್ರೆಸ್ ಮುಖಂಡ ಗುರ್ಮಿತ್ ಸಿಂಗ್ ಕುಡಿಯನ್ ಸೋಮವಾರ ಎಎಪಿ ಪಂಜಾಬ್ ಘಟದ ಮುಖ್ಯಸ್ಥ ಭಾಗವತ್ ಮನ್ ಮತ್ತು ಚಾಧಾ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com