ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

ಬಾರಾಮುಲ್ಲಾ ಜಿಲ್ಲೆಯ ಚಂದೂಸಾ ಎಂಬ ಪ್ರದೇಶದಲ್ಲಿ ಫಜಲ್ ಅಹ್ಮದ್ ಎಂಬ ವ್ಯಕ್ತಿಗೆ ಭದ್ರತೆಯನ್ನು ನೀಡಲಾಗಿತ್ತು. ಇಂದು ಬೆಳಗಿನ ಜಾವ ಸ್ಥಳಕ್ಕೆ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಘಟನೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆ ಅಲ್ತಾಫ್ ಎಂಬುವವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಹೇಳಲಾಗುತ್ತಿದೆ. 

ಭದ್ರತೆ ಒದಗಿಸಲಾಗಿದ್ದ ಫಜರ್ ಅಹ್ಮದ್ ಅವರು ಮಾಜಿ ಉಪ ಮುಖ್ಯಮಂತ್ರಿ ಮುಜಾಫರ್ ಬೇಗ್ ಅವರ ಸಹೋದರನಾಗಿದ್ದಾರೆಂದು ತಿಳಿದುಬಂದಿದೆ. ಅಹ್ಮದ್ ಅವರ ಕುಟುಂಬ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com