ಅಕ್ಟೋಬರ್ 3ಕ್ಕೆ ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ

ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್ ( ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ )ಅಕ್ಟೋಬರ್ 3 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್ ( ಜೆಇಇ ಅಡ್ವಾನ್ಸ್ ಡ್ ಪರೀಕ್ಷೆ )ಅಕ್ಟೋಬರ್ 3 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದ್ದಾರೆ. ಈ ಹಿಂದೆ ಜುಲೈ 3 ರಂದು ನಿಗದಿಯಾಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದ ಮುಂದೂಡಲಾಗಿತ್ತು.

ಜೆಇಇ ಅಡ್ವಾನ್ಸ್‌ಡ್ 2021 ಅಥವಾ ಐಐಟಿ ಜೆಇಇ ಪ್ರವೇಶ ಪರೀಕ್ಷೆಗಳನ್ನು ಅಕ್ಟೋಬರ್ ಮೂರರಂದು ನಡೆಸಲಾಗುವುದು, ಎಲ್ಲಾ ಕೋವಿಡ್ ಶಿಷ್ಟಾಚಾರ ಪಾಲನೆಯೊಂದಿಗೆ ಪರೀಕ್ಷೆ ನಡೆಸಲಾಗುವುದು ಎಂದು ಪ್ರಧಾನ್ ಟ್ವೀಟ್ ಮಾಡಿದ್ದಾರೆ.

ಈ ವರ್ಷ, ಐಐಟಿ-ಖರಗ್‌ಪುರ ಪರೀಕ್ಷೆಯನ್ನು ನಡೆಸುತ್ತಿದ್ದು, ಇದು ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ಅರ್ಹತಾ ಪರೀಕ್ಷೆಯಾಗಿದೆ. ದೇಶಾದ್ಯಂತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಜೆಇಇ-ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದನ್ನು ಜೆಇಇ-ಅಡ್ವಾನ್ಸ್ಡ್‌ಗೆ ಅರ್ಹತಾ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com