ಮಣಿಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೀರಾಬಾಯಿ ಚಾನು ನೇಮಕ- ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಘೋಷಣೆ

ಟೋಕಿಯೊ ಒಲಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಸೋಮವಾರ ಪ್ರಕಟಿಸಿದ್ದಾರೆ.
ಮೀರಾಬಾಯಿ ಚಾನು
ಮೀರಾಬಾಯಿ ಚಾನು

ಇಂಪಾಲ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಸೋಮವಾರ ಪ್ರಕಟಿಸಿದ್ದಾರೆ.  ಅಲ್ಲದೇ, ರಾಜ್ಯ ಸರ್ಕಾರದಿಂದ 1 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್ ನಲ್ಲಿ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವ ಮೀರಾಬಾಯಿ ಚಾನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ (ಕ್ರೀಡಾ) ನೇಮಕವಾಗಲಿದ್ದು, ರಾಜ್ಯದಲ್ಲಿ ಶೀಘ್ರದಲ್ಲೇ ವಿಶ್ವ ದರ್ಜೆ ಗುಣಮಟ್ಟದ ವೇಯ್ಟ್ ಲಿಫ್ಟಿಂಗ್ ಅಕಾಡೆಮಿ ಸ್ಥಾಪಿಸಲು ಮಣಿಪುರ ಸರ್ಕಾರ ನಿರ್ಧರಿಸಿದೆ ಎಂದು ಸಿಂಗ್ ಹೇಳಿದರು.

ಜುಡೋಕಾ ಎಲ್ ಸುಶೀಲಾ ದೇವಿಗೆ ಕಾನ್‌ ಸ್ಟೇಬಲ್  ಹುದ್ದೆಯಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಬಡ್ತಿ ನೀಡಲಾಗುವುದು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಿಸಿದರು. ಟೋಕಿಯೊ ಒಲಂಪಿಕ್ಸ್‌ನಲ್ಲಿ ಚಾನು, ದೇವಿ ಮತ್ತು ಬಾಕ್ಸರ್ ಮೇರಿ ಕೋಮ್ ಸೇರಿದಂತೆ ಮಣಿಪುರದ ಕನಿಷ್ಠ ಐದು ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.    
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com