ಕುಲ್ಗಾಮ್ ನಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಉಗ್ರ ಬಲಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅಪರಿಚಿತ ಉಗ್ರನೋರ್ವನನ್ನು ಹೊಡೆದುರುಳಿಸಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅಪರಿಚಿತ ಉಗ್ರನೋರ್ವನನ್ನು ಹೊಡೆದುರುಳಿಸಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರ ಜಿಲ್ಲೆಯ ಅಹರ್ಬಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಭದ್ರತಾ ಪಡೆಯನ್ನು ಕಂಡ ಉಗ್ರನು ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಎನ್ ಕೌಂಟರ್ ನಲ್ಲಿ ಉಗ್ರ ಹತನಾಗಿದ್ದಾನೆ.

ಈ ಪ್ರದೇಶದಲ್ಲಿ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com