ಪೆಗಾಸಸ್ ವಿವಾದ: ತನಿಖೆಗೆ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ, ರಾಜಕಾರಣಿಗಳ, ಅಧಿಕಾರಿಗಳು ಮತ್ತು ಪತ್ರಕರ್ತರ ದೂರವಾಣಿ ಕದ್ದಾಲಿಕೆ ಆರೋಪದ ಕುರಿತು ತನಿಖೆ ನಡೆಸಲು....
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ, ರಾಜಕಾರಣಿಗಳ, ಅಧಿಕಾರಿಗಳು ಮತ್ತು ಪತ್ರಕರ್ತರ ದೂರವಾಣಿ ಕದ್ದಾಲಿಕೆ ಆರೋಪದ ಕುರಿತು ತನಿಖೆ ನಡೆಸಲು ತಮ್ಮ ಸರ್ಕಾರ ಇಬ್ಬರು ಸದಸ್ಯರ ತನಿಖಾ ಸಮಿತಿ ರಚಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ನಿವೃತ್ತ ನ್ಯಾಯಾಧೀಶರು ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.

ಫೋನ್ ಹ್ಯಾಕಿಂಗ್ ಕುರಿತು ತನಿಖೆಗೆ "ಕೇಂದ್ರ ಸರ್ಕಾರ ತನಿಖಾ ಸಮಿತಿ ರಚಿಸುತ್ತದೆ ಅಥವಾ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಆದೇಶಿಸುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಕೇಂದ್ರವು ಸುಮ್ಮನೆ ಕುಳಿತಿದೆ ... ಆದ್ದರಿಂದ ನಾವು ತನಿಖೆ ನಡೆಸಲು ತನಿಖಾ ಸಮಿತಿ ರಚಿಸಲು ನಿರ್ಧರಿಸಿದ್ದೇವೆ ಎಂದು ಮಮತಾ ಬ್ಯಾನರ್ಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಬ್ಬರು ಸದಸ್ಯರ ತನಿಖಾ ಸಮಿತಿಯ ನೇತೃತ್ವವನ್ನು ಕೋಲ್ಕತ್ತಾ ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮಯ್ ಭಟ್ಟಾಚಾರ್ಯ ವಹಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಭೀಮರಾವ್ ಲೋಕೂರ್ ಇದರ ಇತರ ಸದಸ್ಯರಾಗಿರಲಿದ್ದಾರೆ. "ಪಶ್ಚಿಮ ಬಂಗಾಳ ಜನರ ಹೆಸರುಗಳು ಪೆಗಾಸಸ್ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಕೇಂದ್ರವು ಎಲ್ಲರ ಮೇಲೆ ಕಣ್ಣಿಡಲು ಪ್ರಯತ್ನಿಸುತ್ತಿದೆ. ಈ ಅಕ್ರಮ ಹ್ಯಾಕಿಂಗ್ ಬಗ್ಗೆ ಸಮಿತಿ ತನಿಖೆ ನಡೆಸಲಿದೆ" ಎಂದು ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com