ರಾಮಪ್ಪ ಮಂದಿರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಸ್ಥಾನಮಾನ: ದೇವಾಲಯದ ಭದ್ರತೆ ಹೆಚ್ಚಿಸಿದ ಪುರಾತತ್ವ ಇಲಾಖೆ!

ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್‌ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಲುಗು: ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್‌ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ. 

ಈ ಹಿಂದೆ ಭಾರತೀಯ ಪುರಾತತ್ವ ಇಲಾಖೆಯು ದೇವಾಲಯಕ್ಕೆ ಪೊಲೀಸ್ ಭದ್ರತೆ ಒದಗಿಸುವಂತೆ ತೆಲಂಗಾಣ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸೂಚಿಸಿತ್ತು. ಆದರೆ, ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗದ ಹಿನ್ನೆಲೆಯಲ್ಲಿ, ಇಲಾಖೆಯೇ ದೇವಾಲಯಕ್ಕೆ 24*7 ಭದ್ರತೆಯೊದಗಿಸಲು ನಿರ್ಧರಿಸಿದೆ. 

ಪುರಾತತ್ವ ಇಲಾಖೆಯ ಅಧಿಕಾರಿಗಳು ಮಾತನಾಡಿ, ಈಗಾಗಲೇ ದೇವಾಲಯಕ್ಕೆ ತರಬೇತಿ ಪಡೆದ 6 ಮಂದಿ ಭದ್ರತಾ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ. ಈ ಹಿಂದೆಯೇ ದೇವಾಲಯಕ್ಕೆ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಎಎಸ್ಐ ತಮ್ಮ ವೇತನ ಮಸೂದೆಗಳನ್ನು ತೆಗೆದುಕೊಳ್ಳಬೇಕೆಂಬ ನಿಯಮದೊಂದಿಗೆ ರಾಜ್ಯ ಸರ್ಕಾರ ದೇವಾಲಯಕ್ಕೆ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿತ್ತು. ಹೀಗಾಗಿ, ಇಲಾಖೆಯೇ ಭದ್ರತಾ ಪಡೆಗಳನ್ನು ನಿಯೋಜನೆಗೊಳಿಸಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com