ದೇಶದಲ್ಲಿ 46 ಕೋಟಿ ಡೋಸ್ ದಾಟಿದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ- ಕೇಂದ್ರ ಸರ್ಕಾರ

ದೇಶದಲ್ಲಿ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ 46 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಂಜೆ 7 ಗಂಟೆಯ ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ 44,38,901 ಡೋಸ್ ಲಸಿಕೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ 46 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಂಜೆ 7 ಗಂಟೆಯ ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ 44,38,901 ಡೋಸ್ ಲಸಿಕೆ ನೀಡಲಾಗಿದೆ.

ಶುಕ್ರವಾರ 18ರಿಂದ 44 ವರ್ಷದೊಳಗಿನ 20,96,446 ಮಂದಿ ಮೊದಲ ಡೋಸ್ ಹಾಗೂ 3,41,500 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾದಾಗಿನಿಂದಲೂ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18ರಿಂದ ವರ್ಷದೊಳಗಿನ 15,17,27,430 ಜನರು ಮೊದಲ ಡೋಸ್ ಹಾಗೂ 80,31,011 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18 ರಿಂದ 44 ವರ್ಷದೊಳಗಿನ 1 ಕೋಟಿ ಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 18 ರಿಂದ 44 ವರ್ಷದೊಳಗಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಅಭಿಯಾನದ 196ನೇ ದಿನ ಒಟ್ಟು 44,38,901 ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com