ಭಾರತದಲ್ಲಿ ಮತ್ತೆ ಏರುತ್ತಿರುವ ಕೊರೋನಾ: ದೇಶದಲ್ಲಿಂದು 44,230 ಹೊಸ ಕೇಸ್ ಪತ್ತೆ, 555 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,230 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 555 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮತ್ತೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 44,230 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 555 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,15,72,344ಕ್ಕೆ ತಲುಪಿದ್ದು, ಸಾವಿನ 4,23,217ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 42,360 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,07,43,972ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,05,155ಕ್ಕೆ ಇಳಿಕೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ 18,16,277 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 46,46,50,723 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ  45,60,33,754 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com