ಪೊಲೀಸ್ ಮೂಲಗಳನ್ನು ಆಧರಿಸಿದ ವರದಿಗಳು ಮಾನಹಾನಿಕರ ಎನ್ನಲಾಗದು: ಶಿಲ್ಪಾ ಶೆಟ್ಟಿ ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್

ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳನ್ನು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.
ಶಿಲ್ಪಾಶೆಟ್ಟಿ, ರಾಜ್ ಕುಂದ್ರಾ
ಶಿಲ್ಪಾಶೆಟ್ಟಿ, ರಾಜ್ ಕುಂದ್ರಾ

ಮುಂಬೈ: ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳನ್ನು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.

ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ನಟಿಯೂ ತಮ್ಮಿಂದ ಏನನ್ನು ನಿರೀಕ್ಷಿಸುತ್ತಿದ್ದಾರೋ ಅದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದಿದೆ.

"ನಾವು ಕುಳಿತುಕೊಂಡು ಪ್ರತಿಯೊಂದು ವರದಿಗಳಿಗೂ ಮಾಧ್ಯಮ ಸಂಸ್ಥೆಗಳು ಯಾವ ಮೂಲಗಳನ್ನು ಉಲ್ಲೇಖಿಸುತ್ತಿವೆ ಎಂದು ಪರಿಶೀಲಿಸಬೇಕು ಎಂದು ನೀವು ಬಯಸುತ್ತೀರಾ?" ಎಂದು ನ್ಯಾಯಾಲಯ ಶಿಲ್ಪಾ ಶೆಟ್ಟಿ ಅವರ ವಕೀಲರಿಗೆ ಪ್ರಶ್ನಿಸಿದೆ.

"ನೀವು ವ್ಯಕ್ತಿಗತವಾದ ಮಾನಹಾನಿ ವಿಷಯಗಳ ಬಗ್ಗೆ ಹೇಳಿ ನಾನು ಅದನ್ನು ಪರಿಶೀಲಿಸುತ್ತೇನೆ. ಆದರೆ ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಕರೆಯಲಾಗುವುದಿಲ್ಲ. ನಾನು ಏನು ಮಾಡಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರಿ ಎಂಬುದು ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ" ಎಂದಿದ್ದಾರೆ.

"ನೀವು ಸಾರ್ವಜನಿಕ ಜೀವನದಲ್ಲಿದ್ದರೆ ಇಂತಹ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಜನರು ನಿಮ್ಮ ಜೀವನದ ಬಗ್ಗೆ ಆಸಕ್ತರಾಗಿರುತ್ತಾರೆ. ಅವರು ಅಳುತ್ತಾರೆ ಮತ್ತು ತಮ್ಮ ಗಂಡನೊಂದಿಗೆ ಜಗಳವಾಡಿದ್ದಾರೆ ಎಂದು ಬರೆಯುವವರು ಹೇಗೆ ಮಾನಹಾನಿಯಾಗುತ್ತಾರೆ?" ನ್ಯಾಯಾಲಯ ಪ್ರಶ್ನಿಸಿದೆ.

ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿಲ್ಪಾ ಶೆಟ್ಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com