ಸ್ವತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ಸಾರ್ವಜನಿಕರಿಂದ ಸಲಹೆ ಕೇಳಿದ ಪ್ರಧಾನಿ ಮೋದಿ

ಮುಂಬರುವ ಆಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಮುಂಬರುವ ಆಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.

ಈ  ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಗಸ್ಟ್ 15ರ ಸ್ವಾತಂತ್ರ್ಯೋತ್ವ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.  ಅಲ್ಲದೆ ನಿಮ್ಮ ಸಲಹೆಗಳು ಕೆಂಪು ಕೋಟೆಯ ಗೋಡೆಗಳ ಮೇಲಿಂದ ಇಡೀ ದೇಶಕ್ಕೇ ಪ್ರತಿಧ್ವನಿಸುತ್ತವೆ ಎಂದು ಹೇಳಿದರು.  

ಪ್ರಧಾನ ಮಂತ್ರಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ದೇಶಕ್ಕೆ ತಿಳಿಸಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿ ನಾಗರಿಕರಿಂದ ನೇರವಾಗಿ ವಿಚಾರಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸುತ್ತಿದ್ದಾರೆ. ಈ ಬಾರಿಯೂ ಕೂಡ ಅವರು ಸಾರ್ವಜನಿಕರಿಂದ ಸಲಹೆ ಕೇಳಿದ್ದಾರೆ. ನವ ಭಾರತಕ್ಕಾಗಿ ತಮ್ಮ ಕೊಡುಗೆಗಳನ್ನು ಕೊಡುಗೆಯಾಗಿ ನೀಡಲು ನಾಗರಿಕರನ್ನು ಆಹ್ವಾನಿಸಿದ್ದಾರೆ. ಆದ್ದರಿಂದ, ಈಗ ನಿಮ್ಮ ಆಲೋಚನೆಗಳನ್ನು ಹೇಳಲು, ನಿಮ್ಮ ಸಲಹೆಗಳಿಗೆ ಪದಗಳನ್ನು ನೀಡಲು ಮತ್ತು ನಿಮ್ಮ ದೃಷ್ಟಿಯನ್ನು ಸ್ಫಟಿಕೀಕರಿಸಲು ನಿಮಗೆ ಅವಕಾಶವಿದೆ ಎಂದು ಪ್ರಧಾನಿ ಸಚಿವಾಲಯ ಹೇಳಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com