ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದ ರಾಹುಲ್ ಗಾಂಧಿ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಮೊದಲ ಡೋಸ್ ಕೋವಿಡ್-19 ಲಸಿಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಜೂನ್ ತಿಂಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಎರಡು ಡೋಸ್ ಕೋವಿಡ್-19 ಲಸಿಕೆ ಪಡೆದಿದ್ದರು. ಆದರೆ, ಮೇ ತಿಂಗಳಲ್ಲಿ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರಿಂದ ರಾಹುಲ್ ಗಾಂಧಿ ಲಸಿಕೆಯನ್ನು ಪಡೆದಿರಲಿಲ್ಲ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಕೋವಿಡ್ -19 ಲಸಿಕೆಯನ್ನು ಪಡೆದಿದ್ದಾರೆಯೇ ಎಂದು ಬಿಜೆಪಿ ಮುಖಂಡರು ನಿರಂತರವಾಗಿ ಪ್ರಶ್ನಿಸುತ್ತಿದ್ದರು. ಅಲ್ಲದೇ, ಲಸಿಕೆ ಪಡೆದಿರುವ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳುವಂತೆ ಕೇಳುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com