ಮಹಾರಾಷ್ಟ್ರ, ಕೇರಳದದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯ
ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಜನರು 72 ಗಂಟೆಗಳಿಗಿಂತ ಮುಂಚೆ ಪರೀಕ್ಷೆ ಮಾಡಿಸಿದ ಆರ್‌ಟಿ-ಪಿಸಿಆರ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಶನಿವಾರ ಘೋಷಿಸಿದೆ.
Published: 31st July 2021 08:46 PM | Last Updated: 31st July 2021 08:46 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಜನರು 72 ಗಂಟೆಗಳಿಗಿಂತ ಮುಂಚೆ ಪರೀಕ್ಷೆ ಮಾಡಿಸಿದ ಆರ್‌ಟಿ-ಪಿಸಿಆರ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಶನಿವಾರ ಘೋಷಿಸಿದೆ.
ರಾಜ್ಯಕ್ಕೆ ವಿಮಾನ, ಬಸ್, ರೈಲು ಮತ್ತು ವೈಯಕ್ತಿಕ ವಾಹನಗಳ ಮೂಲಕ ಬರುವ ಎಲ್ಲಾ ಪ್ರಯಾಣಿಕರಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶದ ಪ್ರಕಾರ, ವಿಮಾನಯಾನ ಸಂಸ್ಥೆಗಳು 72 ಗಂಟೆಗಳಿಗಿಂತ ಹಳೆಯದಾದ ಆರ್ ಟಿಪಿಸಿಆರ್ ನೆಗಟಿವ್ ಪ್ರಮಾಣಪತ್ರ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಬೋರ್ಡಿಂಗ್ ಪಾಸ್‌ಗಳನ್ನು ನೀಡುತ್ತವೆ.
ಇನ್ನು ರೈಲುಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್ ಟಿಪಿಸಿಆರ್ ನೆಗಟಿವ್ ಪ್ರಮಾಣಪತ್ರಗಳನ್ನು ಹೊಂದಿರುವುದನ್ನು ಖಾತ್ರಿಪಡಿಸುವ ಜವಾಬ್ದಾರಿಯನ್ನು ರೈಲ್ವೆ ಅಧಿಕಾರಿಗಳು ನೀಡಲಾಗಿದೆ.
ಬಸ್‌ನಲ್ಲಿ ಪ್ರಯಾಣಿಸುವವರಿಗೆ, ಬಸ್ ಕಂಡಕ್ಟರ್ ಆರ್ ಟಿಪಿಸಿಆರ್ ನೆಗಟಿವ್ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.
ಕೇರಳದಿಂದ ಬರುವವರಿಗೆ, ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಗಡಿ ಜಿಲ್ಲೆಗಳ ಉಪ ಆಯುಕ್ತರು ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಬೇಕು ಮತ್ತು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲು ವ್ಯವಸ್ಥೆ ಮಾಡಬೇಕು. ಕರ್ನಾಟಕಕ್ಕೆ ಪ್ರವೇಶಿಸುವ ವಾಹನಗಳನ್ನು(ಚಾಲಕ, ಪ್ರಯಾಣಿಕರು, ಸಹಾಯಕ /ಕ್ಲೀನರ್) ಮೇಲಿನ ಅವಶ್ಯಕತೆಯ ಅನುಸರಣೆಗಾಗಿ ಪರಿಶೀಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.