ಮಧ್ಯಪ್ರದೇಶ: ಕಾರಾಗೃಹದ ಗೋಡೆ ಕುಸಿತ, 22 ಕೈದಿಗಳಿಗೆ ಗಾಯ

ಮಧ್ಯಪ್ರದೇಶ ರಾಜ್ಯದ ಭಿಂಡ್ ಜಿಲ್ಲೆಯಲ್ಲಿರುವ ಕಾರಾಗೃಹದ ಗೋಡೆಯೊಂದು ಕುಸಿದುಬಿದ್ದ ಪರಿಣಾಮ 22 ಕೈದಿಗಳು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 
ಗೋಡೆ ಕುಸಿದು ಬಿದ್ದಿರುವುದು
ಗೋಡೆ ಕುಸಿದು ಬಿದ್ದಿರುವುದು

ಭಿಂಡ್: ಮಧ್ಯಪ್ರದೇಶ ರಾಜ್ಯದ ಭಿಂಡ್ ಜಿಲ್ಲೆಯಲ್ಲಿರುವ ಕಾರಾಗೃಹದ ಗೋಡೆಯೊಂದು ಕುಸಿದುಬಿದ್ದ ಪರಿಣಾಮ 22 ಕೈದಿಗಳು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಇಂದು ಬೆಳಗಿನ 5.10ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಾರಾಗೃಹದ ನಂ.6ನೇ ಕೊಠಡಿಯ ಗೋಡೆ ಕುಸಿದುಬಿದ್ದಿದೆ ಎಂದು ಭಿಂಡ್ ಜಿಲ್ಲೆಯ ಎಸ್'ಪಿ ಮನೋಜ್ ಕುಮಾರ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ. 

ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದಾರೆ. 22 ಮಂದಿಯ ಪೈಕಿ ಓರ್ವ ಕೈದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಗಾಯಗೊಂಡ ಕೈದಿಗಳನ್ನು ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆ ವೇಳೆ ಕಾರಾಗೃಹದಲ್ಲಿ ಒಟ್ಟು 255 ಮಂದಿ ಕೈದಿಗಳಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. 

ಕಾರಾಗೃಹದ ಕಟ್ಟಡ ಅತ್ಯಂತ ಹಳೆಯದಾಗಿದ್ದು, ಕಳೆದ ಕೆಲ ದಿನಗಳಿಂದ ಸುದೀರ್ಘ ಮಳೆಯಾಗಿದ್ದರಿಂದ ಗೋಡೆ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com