ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ, 2,795 ಮಂದಿ ಸಾವು

ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಒಂದೇ ದಿನ 2,795 ಮಂದಿ ಮೃತಪಟ್ಟಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಒಂದೇ ದಿನ 2,795 ಮಂದಿ ಮೃತಪಟ್ಟಿದ್ದಾರೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,55,287 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,59,47,629ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,25,374 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 34,67,92,257 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 21,60,46,638 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com