ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಇಲ್ಲಿಯವರೆಗೂ 23 ಕೋಟಿಗೂ ಹೆಚ್ಚು ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಇಲ್ಲಿಯವರೆಗೂ 23 ಕೋಟಿಗೂ ಹೆಚ್ಚು ಲಸಿಕೆಯನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದಡಿಯಲ್ಲಿ ಈ ವರೆಗೂ 23 ಕೋಟಿ ಡೋಸ್ ಗೂ ಹೆಚ್ಚು ಲಸಿಕೆಗಳನ್ನು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಪ್ರಸ್ತುತ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್'ಗೂ ಹೆಚ್ಚು ಕೋವಿಡ್ ಲಸಿಕೆ ದಾಸ್ತಾನಿದೆ ಎಂದು ಸಚಿವಾಲಯ ತಿಳಿಸಿದೆ. 

ಈ 23 ಕೋಟಿ ಡೋಸ್ ಲಸಿಕೆಗಳ ಪೈಕಿ ವ್ಯರ್ಥವಾದ ಲಸಿಕೆಗಳನ್ನು ಸೇರಿಸಿ 21,51,48,659 ಡೋಸ್ ಲಸಿಕೆಗಳನ್ನು ಬಳಕೆ ಮಾಡಲಾಗಿದ್ದು, ಇನ್ನು 1.57 ಕೋಟಿ (1,57,74,331) ಡೋಸ್ ಲಸಿಕೆಗಳ ದಾಸ್ತಾನಿದೆ. ಹೆಚ್ಚುವರಿ ಎಂದು ಹೇಳಿದೆ. 

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡುವ ಮೂಲಕ ಬೆಂಬಲ ನೀಡುತ್ತಿದೆ. ಇದಲ್ಲದೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಗಳನ್ನು ನೇರವಾಗಿ ತಯಾರಿಕಾ ಕಂಪನಿಗಳಿಂದಲೇ ಖರೀದಿ ಮಾಡಲು ಸಹಕಾರ ನೀಡುತ್ತಿದೆ. 

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 21,60,46,638 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com