ಎನ್ ಹೆಚ್ ಆರ್ ಸಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ನೇಮಕ

ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ
ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಎನ್ಎಚ್ಆರ್ಸಿ ಅಧ್ಯಕ್ಷರಾಗಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎಚ್ಎಲ್ ದತ್ತು ಅವರ ಅವಧಿ 2020 ರ ಡಿಸೆಂಬರ್ ನಲ್ಲಿ ಕೊನೆಗೊಂಡಿತ್ತು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.'ನ್ಯಾಯಮೂರ್ತಿ ಅರುಣ್ ಮಿಶ್ರಾ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹೊಸ ಅಧ್ಯಕ್ಷರಾಗಿ  ನೇಮಕವಾಗಿದ್ದಾರೆ ಎಂದು ಉನ್ನತ ಮೂಲಗಳು ಖಚಿತ ಪಡಿಸಿವೆ. 

ಹೊಸ ಎನ್ಎಚ್ಆರ್ಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಪ್ರಕ್ರಿಯೆಯಿಂದ ಕಾಂಗ್ರೆಸ್ ದೂರ ಸರಿದಿದೆ.

ನ್ಯಾಯಮೂರ್ತಿ ಮಿಶ್ರಾ ಅವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಸಮಿತಿ ಶಿಫಾರಸು ಮಾಡಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com