ಯೂಟ್ಯೂಬ್ ಶೋನಲ್ಲಿ ದೇಶದ್ರೋಹ ಕೇಸು: ಪತ್ರಕರ್ತ ವಿನೋದ್ ದುವಾ ವಿರುದ್ಧದ ಎಫ್ಐಆರ್ ರದ್ದುಪಡಿಸಿದ ಸುಪ್ರೀಂ ಕೋರ್ಟ್ 

ಯೂಟ್ಯೂಬ್ ಶೋ ಕಾರ್ಯಕ್ರಮದ ಬಗ್ಗೆ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಮತ್ತು ಇತರ ಅಪರಾಧ ಕೇಸುಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.
ಪತ್ರಕರ್ತ ವಿನೋದ್ ದುವಾ
ಪತ್ರಕರ್ತ ವಿನೋದ್ ದುವಾ

ನವದೆಹಲಿ: ಯೂಟ್ಯೂಬ್ ಶೋ ಕಾರ್ಯಕ್ರಮದ ಬಗ್ಗೆ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಮತ್ತು ಇತರ ಅಪರಾಧ ಕೇಸುಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.

ಹಿಮಾಚಲ ಪ್ರದೇಶದ ಸ್ಥಳೀಯ ಬಿಜೆಪಿ ಮುಖಂಡರು ವಿನೋದ್ ದುವಾ ವಿರುದ್ಧ ಕೇಸು ದಾಖಲಿಸಿದ್ದರು. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ವಿನೀತ್ ಶರಣ್ ನೇತೃತ್ವದ ನ್ಯಾಯಪೀಠ ಇದೇ ಸಂದರ್ಭದಲ್ಲಿ ಸಮಿತಿಯಿಂದ ತೆರವುಗೊಳಿಸದ ಹೊರತು 10 ವರ್ಷಗಳ ಅನುಭವ ಹೊಂದಿರುವ ಯಾವುದೇ ಮಾಧ್ಯಮ ಸಿಬ್ಬಂದಿಗಳ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸಲಾಗುವುದಿಲ್ಲ ಎಂದು ದುವಾ ಅವರ ಮನವಿಯನ್ನು ಕೂಡ ತಿರಸ್ಕರಿಸಿದೆ.

ಕಳೆದ ವರ್ಷ ಜುಲೈ 20ರಂದು, ಈ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮದಿಂದ ದುವಾ ಅವರಿಗೆ ರಕ್ಷಣೆ ನೀಡುವಂತೆ ಮುಂದಿನ ಆದೇಶದವರೆಗೆ ನ್ಯಾಯಾಲಯ ವಿಸ್ತರಿಸಿತ್ತು.

ಅಲ್ಲದೆ ಹಿಮಾಚಲ ಪ್ರದೇಶ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೂರಕ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

ದೇಶದ್ರೋಹ, ಸಾರ್ವಜನಿಕ ರಗಳೆ, ಮಾನಹಾನಿಕರ ಸಂಗತಿಗಳನ್ನು ತಿಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನದ ಆರೋಪಗಳಿಗಾಗಿ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ದುವಾ ವಿರುದ್ಧ ಎಫ್‌ಐಆರ್ ಅನ್ನು ಬಿಜೆಪಿ ನಾಯಕ ಶ್ಯಾಮ್ ಅವರು ಕಳೆದ ವರ್ಷ ಮೇ 6 ರಂದು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಕುಮಾರ್ಸೇನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.

ಪ್ರಧಾನಿ ಮೋದಿ ವಿರುದ್ಧ ಯೂಟ್ಯೂಬ್ ಶೋನಲ್ಲಿ ದುವಾ ಕೆಲವು ಆರೋಪಗಳನ್ನು ಮಾಡಿದ್ದಾರೆ ಎಂದು ಶ್ಯಾಮ್ ದುವಾ ವಿರುದ್ಧ ದೂರಿನಲ್ಲಿ ಆರೋಪ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com