ರಾಜ್ಯಗಳ ಬಳಿ ಇನ್ನೂ 1.93 ಕೋಟಿ ಕೋವಿಡ್ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಸಚಿವಾಲಯ

ರಾಜ್ಯಗಳ ಬಳಿ ಇನ್ನೂ 1.93 (1.93,95,287) ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯಗಳ ಬಳಿ ಇನ್ನೂ 1.93 (1.93,95,287) ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕೇಂದ್ರ ಸರ್ಕಾರ ಈಗಾಗಲೇ ಉಚಿತ ವರ್ಗದಡಿ ಮತ್ತು ಸರ್ಕಾರಗಳ ನೇರ ಖರೀದಿ ವರ್ಗದಡಿ 24 ಕೋಟಿ (24,21,29,250) ಲಸಿಕೆಗಳನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಅನುಪಯುಕ್ತ ಸೇರಿ ಒಟ್ಟು 22,27,33,963 ಡೋಸ್ ಗಳು ಲಭ್ಯವಿವೆ ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರಾದ್ಯಂತ ಲಸಿಕೆ ಅಭಿಯಾನ ಭಾಗವಾಗಿ, ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ವಿತರಿಸುತ್ತಿದೆ, ಅಲ್ಲದೇ, ಕೇಂದ್ರ ಸರ್ಕಾರ ಲಸಿಕೆ ಅಭಿಯಾನವನ್ನು ಸಾರ್ವತ್ರಿಕಗೊಳಿಸುತ್ತಿದೆ. ಇದಕ್ಕಾಗಿ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸುತ್ತಿದೆ. ರೋಗ ಪರೀಕ್ಷೆ, ಪತ್ತೆ, ಮತ್ತು ಚಿಕಿತ್ಸೆ ಅತ್ಯುತ್ತಮ ಮಾರ್ಗವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com