ಕೋವಿಡ್ ಚಿಕಿತ್ಸೆ ಕೋರಿ ಅಸಾರಾಮ್ ಬಾಪು ಅರ್ಜಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಉತ್ತರಾಖಂಡದ ಹರಿದ್ವಾರ ಬಳಿಯ ಆಯುರ್ವೇದ ಕೇಂದ್ರವೊಂದರಲ್ಲಿಯೇ ಚಿಕಿತ್ಸೆ ಪಡೆಯಬೇಕೆಂದು ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿ ಸ್ವಯಂ ಘೋಷಿತ ದೇವಮಾನವ ಮತ್ತು ಅತ್ಯಾಚಾರ ಅಪರಾಧಿ ಅಸರಾಮ್ ಬಾಪು ಸಲ್ಲಿಸಿದ್ದ ಅರ್ಜಿ ಸಂಬಂಧ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
ಅಸಾರಾಮ್ ಬಾಪು
ಅಸಾರಾಮ್ ಬಾಪು

ನವದೆಹಲಿ: ಉತ್ತರಾಖಂಡದ ಹರಿದ್ವಾರ ಬಳಿಯ ಆಯುರ್ವೇದ ಕೇಂದ್ರವೊಂದರಲ್ಲಿಯೇ ಚಿಕಿತ್ಸೆ ಪಡೆಯಬೇಕೆಂಬ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮತ್ತು ಅತ್ಯಾಚಾರ ಅಪರಾಧಿ ಅಸರಾಮ್‌ ಬಾಪು ಸಲ್ಲಿಸಿದ್ದ ಅರ್ಜಿ ಸಂಬಂಧ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಲುಥ್ರಾ ಅವರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರ ರಜಾಕಾಲದ ಪೀಠ ಈ ನೋಟಿಸ್ ನೀಡಿದ್ದು, ಉತ್ತರಿಸಲು ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ.

ಅರ್ಜಿದಾರರು 83 ವರ್ಷದ ವ್ಯಕ್ತಿಯಾಗಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ ಮತ್ತು ಗುಜರಾತ್‌ ನ್ಯಾಯಾಲಯದಲ್ಲೂ ಅವರ ಜಾಮೀನು ಅರ್ಜಿ ಬಾಕಿ ಇದೆ. ಮೇ 19 ರ ದಿನಾಂಕದ ಏಮ್ಸ್ ವೈದ್ಯಕೀಯ ವರದಿ ಪ್ರಕಾರ, ಹಿಮೋಗ್ಲೋಬಿನ್ ಮಟ್ಟವ ಸಾಕಷ್ಟ ಕಡಿಮೆಯಿದೆ ಎಂದು ವಿವರಿಸಿದರು.

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಅಸಾರಾಂ ಜೋಧ್‌ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

2002 ರ ಅತ್ಯಾಚಾರ ಪ್ರಕರಣದಲ್ಲಿ ಆತನಿಗೆ ದೋಷಿ ಮತ್ತು 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಮೇ 5ರಂದು ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com