ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 1.20 ಲಕ್ಷ ಹೊಸ ಕೇಸ್ ಪತ್ತೆ, 3,380 ಮಂದಿ ಸಾವು

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,84,421 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 36,11,74,142 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 22,78,60,317 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com