ದೇಶಾದ್ಯಂತ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆ ಅನುಷ್ಠಾನಕ್ಕೆ ಕೇಜ್ರಿವಾಲ್ ಒತ್ತಾಯ

ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರದಿಂದ ಸರ್ಕಾರದಿಂದ ಏಕೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಸಾರ್ವಜನಿಕರ ಮನೆ ಬಾಗಿಲಿಗೆ ಪಡಿತರ ಪೂರೈಕೆ ಯೋಜನೆಯನ್ನು ಕೇಂದ್ರದಿಂದ ಸರ್ಕಾರದಿಂದ ಏಕೆ ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಹಿತಾಸಕ್ತಿಯಿಂದ ಈ ಯೋಜನೆ ಅನುಷ್ಠಾನಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಪಡಿತರ ಅಂಗಡಿಗಳು ಸೋಂಕು ಹರಡುವಿಕೆ ಕೇಂದ್ರವಾಗದಂತೆ ತಡೆಗಟ್ಟಲು ದೇಶಾದ್ಯಂತ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಫಿಜ್ಜಾ, ಬರ್ಗರ್ಸ್, ಸ್ಮಾರ್ಟ್ ಫೋನ್ ಗಳು, ಬಟ್ಟೆಗಳು ಮನೆ ಬಾಗಿಲಿಗೆ ಪೂರೈಕೆ ಮಾಡುವಂತಾದರೆ, ಪಡಿತರವನ್ನು ಏಕೆ ಮನೆ ಬಾಗಿಲಿಗೆ ಪೂರೈಸಬಾರದು ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.  

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಕಂಡ್ ಸರ್ಕಾರ, ರೈತರು ಮತ್ತು ಲಕ್ಷದೀಪ ಜನರು ಒಳಗೊಂಡಂತೆ ಪ್ರತಿಯೊಂದು ವಿಚಾರದಲ್ಲೂ ಕೇಂದ್ರ ಸರ್ಕಾರದ ಜೊತೆಗೆ ಪೈಪೋಟಿ ನಡೆಸಬೇಕಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರತಿಯೊಂದರಲ್ಲೂ ಕೇಂದ್ರ ಸರ್ಕಾರದ ಜೊತೆಗಿನ ಹೋರಾಟದಿಂದ ಜನರು ಬೇಸತಿದ್ದಾರೆ. ಈ ರೀತಿಯ ನಾವು ಹೋರಾಡುತ್ತಿದ್ದರೆ ಕೋವಿಡ್ ಹೇಗೆ ನಿಯಂತ್ರಣ ಮಾಡಲು ಸಾಧ್ಯ ಎಂದು ಅವರು ಆನ್ ಲೈನ್ ಭಾಷಣದಲ್ಲಿ ಹೇಳಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಿಲ್ಲ, ಆದರೆ, ಯಾವುದೇ ವಿವಾದವಾಗದಂತೆ ತಡೆಯಲು ಐದು ಬಾರಿ ಅನುಮತಿಯನ್ನು ಕೋರಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದರು.

ಈ ಯೋಜನೆಗೆ  ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕಾಗಿ ಉಪ ರಾಜ್ಯಪಾಲರು  ಯೋಜನೆ ಅನುಷ್ಠಾನಕ್ಕೆ ತಿರಸ್ಕರಿಸಿದ್ದಾರೆ ಎಂದು ದೆಹಲಿ ಸರ್ಕಾರ ಶನಿವಾರ ಹೇಳಿಕೆ ನೀಡಿತ್ತು. 

ಈ ಯೋಜನೆಯಿಂದ ದೆಹಲಿಯ ಪವರ್ ಫುಲ್ ಪಡಿತರ ಮಾಫಿಯಾ ಅಂತ್ಯವಾಗಲಿದೆ. ಒಂದು ವೇಳೆ ನೀವೇ ಪಡಿತರ ಮಾಫಿಯಾ ಜೊತೆಗೆ ನಿಂತರೆ, ಬಡ ಜನರ ಪರ ಯಾರು ನಿಲ್ಲುತ್ತಾರೆ ಎಂದು ಕೇಳಿರುವ ಅರವಿಂದ್ ಕೇಜ್ರಿವಾಲ್, ಈ ಯೋಜನೆಯಿಂದ ರಾಷ್ಟ್ರ ರಾಜಧಾನಿಯ 72 ಲಕ್ಷ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com