ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ: ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ, 2,677 ಮಂದಿ ಸಾವು

ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ. 

ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,46,759ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,77,799ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,89,232 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,69,84,781ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ  20,36,311 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 36,47,46,522 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,13,22,417 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com