ಆರು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ಬೆಲೆ!

ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ 95 ರೂ. ಡೀಸೆಲ್ ಬೆಲೆ 86 ರೂ. ದಾಟಿದೆ.
ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ನವದೆಹಲಿ: ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ 95 ರೂ. ಡೀಸೆಲ್ ಬೆಲೆ 86 ರೂ. ದಾಟಿದೆ. ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯೊಂದರ ಪ್ರಕಾರ, ಪ್ರತಿ ಲೀಟರ್ ಗೆ 21 ಪೈಸೆಯಷ್ಟು ಪೆಟ್ರೋಲ್ ಬೆಲೆ ಏರಿಕೆಯಾಗಿದ್ದರೆ,ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಡೀಸೆಲ್ ಬೆಲೆ ಏರಿಕೆಯಾಗಿದೆ. 

ಮೇ 4ರಿಂದಲೂ 20ನೇ ಬಾರಿಗೆ ದೇಶಾದ್ಯಂತ ತೈಲೆ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಲಡಾಖ್ ನಲ್ಲಿ ಪೆಟ್ರೋಲ್ ಬೆಲೆ 100 ರೂ. ಗಿಂತ ಹೆಚ್ಚಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಎಂಬಂತೆ 95.09 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 86.01 ರೂ. ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನ ವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾದ ನಂತರ ರಿಟೈಲ್ ದರಗಳು ಕೂಡಾ ಹೆಚ್ಚಾಗಿವೆ. 

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳು ನಂತರದ ಸ್ಥಾನದಲ್ಲಿವೆ.

ಮೇ 29 ರಂದು ಮುಂಬೈನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ 100 ರೂ.ಗೆ ತಲುಪಿತ್ತು. ಸದ್ಯ ಅಲ್ಲಿ ಈಗ ಲೀಟರ್ ಪೆಟ್ರೋಲ್ ಬೆಲೆ 101.3 ರೂ ಇದ್ದರೆ ಡೀಸೆಲ್ ಬೆಲೆ 93.35 ರೂ. ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್ ಪೆಟ್ರೋಲ್  ರೂ. 97.92 ಪೈಸೆ ಇದ್ದರೆ ಡೀಸೆಲ್ 90.81 ಪೈಸೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com