ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಲಿಲ್ಲ ಏಕೆ?

ಉತ್ತರ ಪ್ರದೇಶದಲ್ಲಿನ ತನ್ನ ಸರ್ಕಾರದ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಚಿಂತಿತರಾಗಿರುವ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡದಿರುವುದು ಕೂಡಾ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್

ನವದೆಹಲಿ: ಉತ್ತರ ಪ್ರದೇಶದಲ್ಲಿನ ತನ್ನ ಸರ್ಕಾರದ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಚಿಂತಿತರಾಗಿರುವ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡದಿರುವುದು ಕೂಡಾ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಆದಾಗ್ಯೂ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಫೋನ್ ನಲ್ಲಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಜನ್ಮದಿನದ ಶುಭಾಶಯ ಕೋರಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ಮೂಲಗಳು ಹೇಳಿವೆ.

ಕೋವಿಡ್-19 ಎರಡನೇ ಅಲೆಯಲ್ಲಿ ಯಾರಿಗೂ ಪ್ರಧಾನಿ ಟ್ವಿಟ್ ಮಾಡುತ್ತಿಲ್ಲ. ಪ್ರತಿಪಕ್ಷದ ಮುಖಂಡರು ಸೇರಿದಂತೆ ಪ್ರಮುಖ ರಾಜಕೀಯ ನಾಯಕರಿಗೆ ಕಳೆದ ಕೆಲವು ವಾರಗಳಿಂದ  ಟ್ವಿಟರ್ ನಲ್ಲಿ ಜನ್ಮದಿನ ಶುಭಾಶಯ ಹೇಳುವುದನ್ನು ಪ್ರಧಾನಿ ನಿಲ್ಲಿಸಿದ್ದಾರೆ ಎನ್ನಲಾಗಿದೆ. ಅದರಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಕೂಡಾ ಸೇರಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದ ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ಬಗ್ಗೆಗಿನ ಟೀಕೆಗಳ ಬಗ್ಗೆ ಬಿಜೆಪಿ ಉನ್ನತ ಮುಖಂಡರು ಈ ವಾರ ಚಿಂತಿತರಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ಮುಂದಿನ ವರ್ಷ ನಡೆಯಲಿರುವ ಮಹತ್ವದ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಬದಲಿಸುವ ಅಥವಾ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನಿಯೋಜಿಸುವ ವದಂತಿಗಳು ಎಬ್ಬಿದ್ದವು. 

ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಸಂತೋಷ್ ಹಾಗೂ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನ ರಾಜ್ಯ ಸರ್ಕಾರದ ಬಗ್ಗೆ ಪರಾಮರ್ಶೆ ನಡೆಸಿದರು. ಗುರುವಾರ ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಮಂಗಳವಾರ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿದ್ದರು.

ಶುಕ್ರವಾರದ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಬದಲಾವಣೆಯನ್ನು ತಳ್ಳಿ ಹಾಕಿವೆ, ಆದರೆ, ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಹೇಳಿವೆ.ಪ್ರಧಾನಿ ಮೋದಿ ಅವರಿಗೆ ಆಪ್ತರೆನಿಸಿರುವ ಮಾಜಿ ಅಧಿಕಾರಿ ಎಕೆ ಶರ್ಮಾ, ಉತ್ತರ ಪ್ರದೇಶ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com