ಪುಣೆಯಲ್ಲಿ ಭೀಕರ ಅಗ್ನಿ ಅವಘಡ; 17 ಕಾರ್ಮಿಕರ ಸಾವು, ಹಲವರು ನಾಪತ್ತೆ

ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.
ಪುಣೆ ಅಗ್ನಿ ಅವಘಡ
ಪುಣೆ ಅಗ್ನಿ ಅವಘಡ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.

ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಕೂಡಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. 

ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ದೇವೇಂದ್ರ ಪಾಟ್ ಫೋಡೆ ಅವರು, ಈ ವರೆಗೂ 17 ದೇಹಗಳನ್ನು ಹೊರತೆಗೆಯಲಾಗಿದೆ. ಈ ಪೈಕಿ 15 ಮಂದಿ ಮಹಿಳೆಯರು ಇಬ್ಬರು ಪುರುಷರ ಮೃತದೇಹಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ. ಬೆಂಕಿ ನಂದಿಸವ ಕಾರ್ಯಾಚರಣೆ  ಮುಂದುವರೆದಿದೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 37 ಮಂದಿ ಕಾರ್ಮಿಕರು ಇದ್ದರು. ಈ ಪೈಕಿ 20 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com