ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಹೊಸ ಘೋಷಣೆ ಪ್ರಕಟ?

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮಂತ್ರಿ ಕಾರ್ಯಾಲಯ, ಇಂದು ಸಾಯಂಕಾಲ 5 ಗಂಟೆಗೆ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.

ಇಂದು ಪ್ರಧಾನಿಯವರು ಎಲ್ಲಾ ನಾಗರಿಕರು ಉಚಿತ ಕೋವಿಡ್ ಲಸಿಕೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಲವು ವರ್ಗಗಳಿಗೆ ಪರಿಹಾರ ಪ್ಯಾಕೇಜ್ ಘೋಷಿಸುತ್ತಾರೆ, ಬೇರೇನಾದರೂ ನಿರ್ಧಾರ ಪ್ರಕಟಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಕಳೆದ ವರ್ಷ ಕೋವಿಡ್-19 ದೇಶಕ್ಕೆ ಅಪ್ಪಳಿಸಿದ ನಂತರ ಹಲವು ಬಾರಿ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ದೇಶವನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹೊಸ ಘೋಷಣೆಗಳನ್ನು ಪ್ರಕಟಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com